ಮಹಾರಾಷ್ಟ್ರ ರಾಜಕೀಯ ಬೆಳವಣಿಗೆ ಇದೀಗ ನೂತನ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಪ್ರಮಾಣವಚನ ಸ್ವೀಕಾರ. ದೇವೇಂದ್ರ ಫಡ್ನವೀಸ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.
ಮುಂಬೈನ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇವರು, ಬಾಳಾ ಸಾಹೇಬ್ ಠಾಕ್ರೆ ಹೆಸರಿನಲ್ಲಿ ಏಕನಾಥ್ ಶಿಂಧೆ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಸಂಜೆ 7.30ಕ್ಕೆ ಮಹಾರಾಷ್ಟ್ರದ ರಾಜಭವನದಲ್ಲಿ ನಡೆದಂತ ಸರಳ ಸಮಾರಂಭದಲ್ಲಿ ಶಿವಸೇನೆಯ ರೆಬೆಲ್ ನಾಯಕ ಏಕನಾಥ್ ಶಿಂಧೆ ಅವರು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಈ ಮೂಲಕ ಶಿವಸೇನೆಯ ರೆಬೆಲ್ ನಾಯಕ ಮಹಾ ಸಿಎಂ ಪಟ್ಟಕ್ಕೇರಿದರು. ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಸ್ಥಾನ ಪಡೆದಿದ್ದಾರೆ.
ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ತರುವ ನಿಟ್ಟಿನಲ್ಲಿ ಚುರುಕಿನ ಪ್ರಕ್ರಿಯೆ ಆರಂಭಗೊಂಡಿತ್ತು. ಯಾರು ಮಹಾರಾಷ್ಟ್ರ ಮುಖ್ಯಮಂತ್ರಿಯಾಗಲಿದ್ದಾರೆ ಎನ್ನುವುದೇ ತೀವ್ರ ಕುತೂಹಲ ಮೂಡಿಸಿತ್ತು. ಅಂತಿಮವಾಗಿ ಬಿಜೆಪಿಯ ದೇವೇಂದ್ರ ಫಡ್ನವಿಸ್ ಸಿಎಂ ಆಗಲಿದ್ದಾರೆ ಎನ್ನಲಾಗಿತ್ತು. ಕೊನೆಯ ಕ್ಷಣದಲ್ಲಿ ಟ್ವಿಸ್ ಸಿಕ್ತು. ಸ್ವತಹ ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಅವರ ರಾಜಭವನದಲ್ಲಿ ಸರ್ಕಾರ ರಚನೆಗೆ ರಾಜ್ಯಪಾಲರನ್ನು ಭೇಟಿಯಾಗಿ ಹೊರ ಬಂದ ನಂತರ, ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಪ್ರಮಾಣ ವಚನ ಸ್ವೀಕರಿಸೋದಾಗಿ ಘೋಷಿಸಿದ್ದರು.ಇದನ್ನು ಓದಿ –ಕೇಂದ್ರ ತಂಡದಿಂದ ಜಲಶಕ್ತಿ ಅಭಿಯಾನದ ಕೆರೆ,ಕಟ್ಟೆ ಕಾಮಗಾರಿಗಳ ವೀಕ್ಷಣೆ-ಪರಿಶೀಲನೆ
ಮಹಾರಾಷ್ಟ್ರದ 20ನೇ ಮುಖ್ಯಮಂತ್ರಿಯಾಗಿ ಏಕನಾಥ ಶಿಂಧೆ ಪ್ರಮಾಣವಚನ ಸ್ವೀಕರಿಸಿದ್ದು, ರಾಜ್ಯಪಾಲ ಕೋಶಿಯಾರಿ ಪ್ರಮಾಣವಚನ ಬೋಧಿಸಿದರು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ನೂತನ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಅವರನ್ನು ಅಭಿನಂದಿಸಿದರು.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ