ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಡಿಸೆಂಬರ್‌ನಲ್ಲಿ ಚುನಾವಣೆ ನಡೆಸಲು ಸರ್ಕಾರ ಚಿಂತನೆ ನಡೆಸಿದೆ.
ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಈ ಸಂಗತಿಯನ್ನು ಸುದ್ದಿಗಾರರಿಗೆ ಶನಿವಾರ ತಿಳಿಸಿ ಬಿಬಿಎಂಪಿ ವಾರ್ಡ್ ಮರು ವಿಂಗಡಣೆಗೆ ಸರ್ಕಾರ ಹೊಸ ಆಯೋಗವನ್ನು ರಚಿಸಿ ಆದೇಶ ಹೊರಡಿಸಿದ ಒಂದು ದಿನದ ನಂತರ ಈ ಹೇಳಿಕೆ ನೀಡಿದ್ದಾರೆ.
ಸರ್ಕಾರದ ಕೋರಿಕೆಯ ಮೇರೆಗೆ ವಾರ್ಡ್ ವಿಂಗಡಣೆಯನ್ನು ಮರುಪರಿಶೀಲಿಸಲು 12 ವಾರಗಳ ಕಾಲಾವಕಾಶವನ್ನು ಜೂನ್ 19 ರಂದು ಹೈಕೋರ್ಟ್ ನೀಡಿತ್ತು. ಈಗಿನ ಮರುವಿಂಗಡಣೆಯಲ್ಲಿ ಲೋಪದೋಷಗಳಿವೆ ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿತ್ತು.
ಹೈಕೋರ್ಟ್ ಆದೇಶದ ನಂತರ ಸರ್ಕಾರ ಬಿಬಿಎಂಪಿ ಆಯುಕ್ತರ ನೇತೃತ್ವದಲ್ಲಿ ಆಯೋಗ ರಚಿಸಿ ಆದೇಶ ಹೊರಡಿಸಿದೆ. ಸಮಿತಿಯ ಸದಸ್ಯರು ಬಿಡಿಎ ಆಯುಕ್ತರು, ಬೆಂಗಳೂರು ಉಪ ಆಯುಕ್ತರು ಮತ್ತು ಬಿಬಿಎಂಪಿ ವಿಶೇಷ ಆಯುಕ್ತರು (ಕಂದಾಯ) ಆಗಿದ್ದಾರೆ.
ಸರ್ಕಾರದ ಆದೇಶದ ಬಗ್ಗೆ ಪ್ರತಿಕ್ರಿಯಿಸಿದ ಸಾರಿಗೆ ಸಚಿವರು, ಬಿಬಿಎಂಪಿಗೆ ಚುನಾವಣೆ ನಡೆಸಲು ಸರ್ಕಾರ ಬದ್ಧವಾಗಿದೆ ಎಂದಿದ್ದಾರೆ.
ಚುನಾವಣೆ ನಡೆಸುವಂತೆ ನ್ಯಾಯಾಲಯದ ಮೊರೆ ಹೋಗಿದ್ದೆವು. ಡಿಸೆಂಬರ್ ವೇಳೆಗೆ ಬಿಬಿಎಂಪಿ ಚುನಾವಣೆ ನಡೆಸುತ್ತೇವೆ. ಬಿಜೆಪಿ ಸರ್ಕಾರ ಅವರ ಇಚ್ಛೆಯಂತೆ ವಾರ್ಡ್ ವಿಂಗಡಣೆ ಮಾಡಿತ್ತು. ಈಗ ನಾವು ಸಮಿತಿ ರಚಿಸಿದ್ದೇವೆ ಮತ್ತು ಅಧಿಕಾರಿಗಳು ತಮ್ಮ ಕೆಲಸವನ್ನು ಮಾಡುತ್ತಾರೆ. ನಾವು ಅದರಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ರೆಡ್ಡಿ ಹೇಳಿದ್ದಾರೆ.ಸೋಲಿನ ಹೊಣೆ ಹೊತ್ತು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಟೀಲ್ ರಾಜೀನಾಮೆ
ಹೊಸ ಬಿಬಿಎಂಪಿ ಕಾಯ್ದೆ ಪ್ರಕಾರ 243 ವಾರ್ಡ್‌ಗಳಿಗೆ ಚುನಾವಣೆ ನಡೆಯಲಿದೆ ಎಂದು ಅವರು ಹೇಳಿದ್ದಾರೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ