ಭಾರತದಲ್ಲಿ 18ನೇ ಲೋಕಸಭಾ ಚುನಾವಣೆಗೆ ಮುಖ್ಯ ಚುನಾವಣಾ ಆಯೋಗ ದಿನಾಂಕವನ್ನ ಘೋಷಿಸಿದೆ, ದೇಶದಲ್ಲಿ 7 ಹಂತದಲ್ಲಿ ಚುನಾವಣೆ ನಡೆಯಲಿದೆ. ಏಪ್ರಿಲ್ 19ರಿಂದ ಲೋಕಸಭೆ ಚುನಾವಣೆ ಆರಂಭವಾಗಿ, ಜೂನ್ 4ಕ್ಕೆ ಫಲಿತಾಂಶ ಪ್ರಕಟವಾಗಲಿದೆ.
ದೇಶದ 543 ಕ್ಷೇತ್ರಗಳಲ್ಲಿ ಈ ಚುನಾವಣೆ ನಡೆಯಲಿದೆ. ಕರ್ನಾಟಕದಲ್ಲಿ 2 ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೊದಲನೇ ಹಂತ ಏಪ್ರಿಲ್ 26ಕ್ಕೆ ಮತ್ತು 2ನೇ ಹಂತದ ಚುನಾವಣೆ ಮೇ 7ರಂದು ನಡೆಯಲಿದೆ.
ಈ ಬಾರಿಯ ಚುನಾವಣೆಯನ್ನು ನಡೆಸಲು ಆಯೋಗ ಸಕಲ ರೀತಿಯಲ್ಲಿ ಸಿದ್ದವಾಗಿದೆ ಎಂದರು. ಇನ್ನು 10.5 ಲಕ್ಷ ಮತಗಟ್ಟೆಗಳು, 55 ಲಕ್ಷ ಇವಿಎಂಗಳನ್ನ ಸಿದ್ದಪಡೆಸಲಾಗಿದೆ .
2024ರ ಚುನಾವಣೆಗೆ ದೇಶದಲ್ಲಿ 96.8 ಕೋಟಿ ಮತದಾರರಿದ್ದು, ಅದರಲ್ಲಿ ಪುರುಷ ಮತದಾರರ ಸಂಖ್ಯೆ 49.7 ಕೋಟಿ ಮತ್ತು ಮಹಿಳಾ ಮತದಾರರ ಸಂಖ್ಯೆ 47.1 ಕೋಟಿಗಿಂತ ಹೆಚ್ಚಾಗಿದೆ. ಇನ್ನು ಈ ಬಾರಿಯ ಚುನಾವಣೆಯಲ್ಲಿ 1.82 ಕೋಟಿ ಮತದಾರರು ಮೊದಲ ಬಾರಿಗೆ ಮತ ಚಲಾಯಿಸಲಿದ್ದಾರೆ .
ಕ್ರಿಮಿನಲ್ ಹಿನ್ನೆಲೆಯ ಅಭ್ಯರ್ಥಿಗಳನ್ನ ಮೊಬೈಲ್ ಆಯಪ್ ಮೂಲಕ ಗುರುತಿಸಬಹುದು ಎಂದು ಆಯುಕ್ತರು ಹೇಳಿದರು.
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ