January 11, 2025

Newsnap Kannada

The World at your finger tips!

vote , election , Tripura

ರಾಜ್ಯದಲ್ಲಿ 10 ಸ್ಥಳೀಯ ಸಂಸ್ಥೆಗಳ ಚುನಾವಣೆ ನಿಗದಿಯಂತೆ ನಡೆಯಲಿದೆ : ಆಯೋಗ

Spread the love

ಈಗಾಗಲೇ ಪ್ರಕಟಿಸಲಾದ ಚುನಾವಣಾ ವೇಳಾಪಟ್ಟಿಯಲ್ಲಿ ಯಾವುದೇ ಕಾರಣಕ್ಕೂ ಬದಲಾವಣೆ ಮಾಡುವುದಿಲ್ಲ ಎಂದು ರಾಜ್ಯ ಚುನಾವಣಾ ಆಯೋಗ ಹೇಳಿದೆ.

ಈ ಕುರಿತಂತೆ ಪ್ರಕಟನೆ ನೀಡಿರುವ ರಾಜ್ಯ ಚುನಾವಣಾ ಆಯೋಗ, ರಾಜ್ಯದಲ್ಲಿ ಈಗ 10 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಮತ್ತು 2 ವಾರ್ಡ್​ಗಳ ಚುನಾವಣಾ ವೇಳಾಪಟ್ಟಿಯಂತೆ ಏ. 27 ರಂದು ಮತದಾನ ನಡೆಯಲಿದೆ ಎಂದು ಹೇಳಿದೆ.

ಸೋಮವಾರದ ಕ್ಯಾಬಿನೆಟ್ ಸಭೆ ಕರೆದಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮುಂದಿನ 6 ತಿಂಗಳು ಯಾವುದೇ ಚುನಾವಣೆ ನಡೆಯುವುದಿಲ್ಲ.. ಈಗಾಗಲೇ ನಿಗದಿಯಾಗಿರುವ ಚುನಾವಣೆಗಳನ್ನು ಮುಂದೂಡುವಂತೆ ಶಿಫಾರಸು ಮಾಡಲಾಗುವುದು ಎಂದು ಹೇಳಿಕೆ ನೀಡಿದ್ದ ಆಯೋಗ ತಿರುಗೇಟು ನೀಡಿದೆ.

Copyright © All rights reserved Newsnap | Newsever by AF themes.
error: Content is protected !!