1 ತಿಂಗಳೊಳಗೆ ರಾಜ್ಯದಲ್ಲಿ ಎಲೆಕ್ಟ್ರಿಕ್ ಬಸ್‍ಗಳ ಸಂಚಾರ: KSRTC ಅಧ್ಯಕ್ಷ ಚಂದ್ರಪ್ಪ ಪ್ರಕಟ

Team Newsnap
1 Min Read

ಮುಂದಿನ ಒಂದು ತಿಂಗಳೊಳಗೆ ರಾಜ್ಯದಲ್ಲಿ ಎಲೆಕ್ಟ್ರಿಕ್ ಬಸ್‍ಗಳು ಸಂಚರಿಸಲಿವೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಎಂ. ಚಂದ್ರಪ್ಪ ಮಂಗಳೂರಿನಲ್ಲಿ ತಿಳಿಸಿದರು.

ಸುದ್ದಿಗಾರರ ಜೊತೆ ಮಾತನಾಡಿದ ಚಂದ್ರಪ್ಪ ಕೋವಿಡ್ ಹಾಗೂ ಇತರೆ ಕಾರಣಗಳಿಂದ ಈ ಹಿಂದೆ ಸರ್ಕಾರಿ ಬಸ್‍ಗಳಿಂದ ದಿನವೊಂದಕ್ಕೆ 6 ರಿಂದ 7ಕೋಟಿಗಳಷ್ಟು ನಷ್ಟ ಆಗುತ್ತಿತ್ತು ಆದರೆ ಸದ್ಯ ಹಲವು ಸುಧಾರಣಾ ಕ್ರಮಗಳನ್ನು ಕೈಗೊಂಡ ಕಾರಣ ದಿನವೊಂದಕ್ಕೆ ಕನಿಷ್ಟ 12 ಕೋಟಿಯಷ್ಟು ವರಮಾನ ಬರುತ್ತಿದೆ ಎಂದರು.ಇದನ್ನು ಓದಿ –ಯಶಸ್ವಿನಿ ಯೋಜನೆ’ ಮತ್ತೆ ಜಾರಿ :ನವೆಂಬರ್ 1 ರಿಂದ ನೋಂದಣಿ ಪ್ರಾರಂಭ

ರಾಜ್ಯದಲ್ಲಿ 450 ನೂತನ ಬಸ್ ಖರೀದಿಗೆ ಕ್ರಮಕೈಗೊಳ್ಳಲಾಗುತ್ತಿದೆ. ಅವುಗಳಲ್ಲಿ ಅತ್ಯುತ್ತಮ ಸೌಲಭ್ಯವಿರುವ 50ವೋಲ್ವೋ ಹಾಗೂ ಎಲೆಕ್ಟ್ರಿಕಲ್ ಬಸ್‍ಗಳಿರಲಿವೆ. ಒಂದು ತಿಂಗಳಿನೊಳಗೆ ರಾಜ್ಯದಲ್ಲಿ ಪರಿಸರ ಸ್ನೇಹಿ ಎಲೆಕ್ಟ್ರಿಕಲ್ ಬಸ್‍ಗಳು ಓಡಾಡಲಿವೆ. ಮಂಗಳೂರು ವಿಭಾಗದಲ್ಲಿ ಸದ್ಯ 490 ಬಸ್‍ಗಳು ಪ್ರತಿದಿನ ಸಂಚರಿಸುತ್ತಿವೆ ದಿನನಿತ್ಯ 1 ಕೋಟಿಯಷ್ಟು ವರಮಾನವಿದೆ ಎಂದರು.

ರಾಜ್ಯದಲ್ಲಿರುವ ಕಟ್ಟಡ ಕಾರ್ಮಿಕರ ಕೂಲಿ ಉಳಿತಾಯಕ್ಕಾಗಿ ಉಚಿತ ಪಾಸ್ ವಿತರಿಸಲು ಚಿಂತಿಸಲಾಗಿದೆ. ಸದ್ಯ 1 ಲಕ್ಷ ಉಚಿತ ಪಾಸ್ ವಿತರಿಸಲು ಮುಖ್ಯಮಂತ್ರಿಗಳು ಆದೇಶ ನೀಡಿದ್ದಾರೆ ಇನ್ನುಳಿದಂತೆ ರಾಜ್ಯದಲ್ಲಿರುವ ಒಟ್ಟು 37 ಲಕ್ಷ ಕಟ್ಟಡ ಕಾರ್ಮಿಕರಿಗೆ ಹಂತ ಹಂತವಾಗಿ ಪಾಸ್ ವಿತರಿಸಲಾಗುವುದು ಎಂದು ಹೇಳಿದರು.

Share This Article
Leave a comment