December 24, 2024

Newsnap Kannada

The World at your finger tips!

thanjvur

ತಮಿಳುನಾಡಿನ ತಂಜಾವೂರಿನಲ್ಲಿ ದುರಂತ : ರಥಕ್ಕೆ ವಿದ್ಯುತ್ ತಂತಿ ತಗುಲಿ 11 ಮಂದಿ ಸಾವು

Spread the love

ತಮಿಳುನಾಡಿನ ತಂಜಾವೂರಿನಲ್ಲಿ ಭಾರಿ ದುರಂತವೊಂದು ಸಂಭವಿಸಿದೆ. ರಥಕ್ಕೆ ವಿದ್ಯುತ್ ತಂತಿ ತಗುಲಿ 11 ಮಂದಿ ಸಾವನ್ನಪ್ಪಿದ್ದಾರೆ.

ಈ ದುರ್ಘಟನೆಯಲ್ಲಿ 14 ಮಂದಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಥೋತ್ಸವದ ವೇಳೆ ರಥ ಎಳೆಯುತ್ತಿದ್ದಾಗ ಮೇಲ್ಭಾಗಕ್ಕೆ ವಿದ್ಯುತ್ ತಂತಿ ತಗುಲಿ ಈ ದುರಂತ ಸಂಭವಿಸಿದೆ. ಆಗ ರಥ ಎಳೆಯುತ್ತಿದ್ದ 11 ಮಂದಿ ಸಾವನ್ನಪ್ಪಿದ್ದಾರೆ.

ಈ ಘಟನೆಯಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ತಮಿಳುನಾಡಿನ ಸರ್ಕಾರ ತಲಾ 5 ಲಕ್ಷ ರು ಪರಿಹಾರ ಘೋಷಣೆ ಮಾಡಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ ಹೈವೋಲ್ಟೇಜ್ ತಂತಿ ರಥಕ್ಕೆ ತಗುಲಿದೆ ಆಗ ರಥ ಎಳೆಯುತ್ತಿದ್ದ 11 ಮಂದಿ ಸಾವನ್ನಪ್ಪಿದ್ದಾರೆ . ರಥ ಕೂಡ ಬೆಂಕಿಯಿಂದ ಭಸ್ಮವಾಗಿದೆ ಎಂದು ಗೊತ್ತಾಗಿದೆ.

ಈ ಕುರಿತಂತೆ ಹೆಚ್ಚಿನ ಮಾಹಿತಿ ಗಳನ್ನು ನಿರೀಕ್ಷಿಸಲಾಗುತ್ತಿದೆ.

Copyright © All rights reserved Newsnap | Newsever by AF themes.
error: Content is protected !!