Karnataka

ವಿದ್ಯುತ್ ದರ ಹೆಚ್ಚಳ ಪ್ರತಿಭಟನೆ : ಮಂಡ್ಯದಲ್ಲಿ ವಾಣಿಜ್ಯೋದ್ಯಮಿಗಳ ಪ್ರತಿಭಟನೆ

ಮಂಡ್ಯ: ವಿದ್ಯುತ್ ದರ ಹೆಚ್ಚಳ ಹಿನ್ನೆಲೆ ರಾಜ್ಯ ಸರ್ಕಾರ ಮತ್ತು ವಿದ್ಯುತ್ ನಿಗಮದ ವಿರುದ್ಧ ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ.

ಮಂಡ್ಯ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿ ಪದಾಧಿಕಾರಿಗಳು, ಸದಸ್ಯರು, ವಾಣಿಜ್ಯೋದ್ಯಮಿಗಳು, ಸಂಘ ಸಂಸ್ಥೆಗಳ ಕಾರ್ಯಕರ್ತರು ತಮ್ಮ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಮೌನ ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರು ಮಂಡ್ಯದ ಮಹಾವೀರ ಭವನದಿಂದ ವಿವಿಧ ರಸ್ತೆಗಳಲ್ಲಿ ಸಂಚರಿಸಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸುತ್ತಾ, ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿ ಸಹಾಯಕರಿಗೆ ಈ ಕುರಿತು ಮನವಿ ಸಲ್ಲಿಸಿದರು.

ಕರ್ನಾಟಕ ವಿದ್ಯುತ್ ನಿಗಮಗಳು ಕೆಲ ದಿನಗಳ ಹಿಂದೆ ವಾಣಿಜ್ಯ, ಕೈಗಾರಿಕೆಗಳ ಹಾಗೂ ಗೃಹ ವಿದ್ಯುತ್ ದರಗಳನ್ನು ಏಕಾಏಕಿ ಶೇಕಡಾ 30 ರಿಂದ 70ರಷ್ಟು ಹೆಚ್ಚಳ ಮಾಡಿದೆ. ಹೀಗೆ ಹೆಚ್ಚುವರಿ ಮಾಡಿರುವ ವಿದ್ಯುತ್ ದರ ಅವೈಜ್ಞಾನಿಕವಾಗಿದೆ ಎಂದು ಆರೋಪಿಸಿದರು.

ದರ ಹೆಚ್ಚಳದಿಂದಾಗಿ ಅದರಲ್ಲೂ ಬಹುಮುಖ್ಯವಾಗಿ ಕೈಗಾರಿಕಾ ವಲಯ ಹಾಗೂ ವಾಣಿಜ್ಯ ಉದ್ಯಮ ಮತ್ತು ವ್ಯಾಪಾರ ವಹಿವಾಟುಗಳಿಗೆ ಹೆಚ್ಚಿನ ಹೊರೆಯಾಗಲಿದೆ. ಮುಂದಿನ ದಿನಗಳಲ್ಲಿ ಕೈಗಾರಿಕೆ ಹಾಗೂ ವ್ಯಾಪಾರಗಳನ್ನು ನಡೆಸಲು ಆಗದೆ ಮುಚ್ಚುವ ಪರಿಸ್ಥಿತಿ ಎದುರಾಗಲಿದೆ. ದರ ಹೆಚ್ಚಳಕ್ಕೆ ರಾಜ್ಯ ಸರ್ಕಾರವೇ ಸಂಪೂರ್ಣ ಹೊಣೆ ಹೋರಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಾಣಿಜ್ಯ ಉದ್ದೇಶ ಮತ್ತು ಗೃಹ ಬಳಕೆಗೆ ಹೆಚ್ಚಿಸಿರುವ ಅವೈಜ್ಞಾನಿಕ ವಿದ್ಯುತ್ ದರವನ್ನು ಕಡಿಮೆ ಮಾಡಬೇಕು ಎಂದು ಒತ್ತಾಯಿಸಿದರು.

ಮಂಡ್ಯದ ಬಹುತೇಕ ಅಂಗಡಿ ಮುಂಗಟ್ಟುಗಳು, ಕೈಗಾರಿಕೆಗಳು, ಸಂಘ ಸಂಸ್ಥೆಗಳ ಕಚೇರಿಗಳನ್ನು ಬಂದ್ ಮಾಡಲಾಗಿತ್ತು. ಇದಕ್ಕೂ ಮುನ್ನ ನಗರದ ವಿವಿಧ ರಸ್ತೆಗಳಲ್ಲಿ ತೆರಳಿ ಅಂಗಡಿ ಮುಂಗಟ್ಟುಗಳ ಮಾಲೀಕರುಗಳಿಗೆ ವಿದ್ಯುತ್ ದರ ಹೆಚ್ಚಳ ಕುರಿತಂತೆ ಜಾಗೃತಿ ಮೂಡಿಸಿ, ಬಂದ್‌ಗೆ ಸಹಕರಿಸುವಂತೆ ಮನವಿ ಮಾಡಿದರು.ಮಹಿಳೆಯರ ‘ಶಕ್ತಿ’ ಪ್ರದರ್ಶನ – 126 ಕೋಟಿ ರೂ. ದಾಟಿತು ಟಿಕೆಟ್ ಮೌಲ್ಯ

ಜಿಲ್ಲಾ ವಾಣಿಜ್ಯ ಮಂಡಳಿ ಅಧ್ಯಕ್ಷ ಕೆ.ಪ್ರಭಾಕರ್, ಉಪಾಧ್ಯಕ್ಷ ಎಂ.ಡಿ. ಹರಿಪ್ರಸಾದ್, ಕಾರ್ಯದರ್ಶಿ ಎಸ್. ಸತೀಶ್‌ ಬಾಬು, ಪದಾಧಿಕಾರಿಗಳಾದ ಕೆ.ಎಂ. ಶಿವಕುಮಾರ್, ಭರತ್‌ ಕುಮಾರ್, ಭೀಮಾರಾಮ್, ಎಂ.ಎಸ್. ಶಿವಪ್ರಕಾಶ್, ಪುಟರ್‌ಮಲ್, ಸೋಮಶೇಖರ್, ವೆಂಕಟೇಶ್‌ ಬಾಬು, ರಾಜೇಂದ್ರಪ್ರಸಾದ್, ಶಾಂತಿಪ್ರಸಾದ್, ಶಿವರಾಮೇಗೌಡ, ಎಚ್.ಆರ್. ಅರವಿಂದ್ ಸೇರಿದಂತೆ ನೂರಾರು ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Team Newsnap
Leave a Comment

Recent Posts

ಸೋಮವಾರದ ತನಕವೂ ರೇವಣ್ಣ ಜೈಲು ಹಕ್ಕಿ

ಬೆಂಗಳೂರು : ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಸದ್ಯ ನಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಹೆಚ್‌ಡಿ ರೇವಣ್ಣ ಸೋಮವಾರದವರೆಗೆ… Read More

May 9, 2024

SSLC ಫಲಿತಾಂಶ : ಬಾಲಕಿಯರೇ ಮೇಲುಗೈ ಉಡುಪಿ ಪ್ರಥಮ- ಯಾದಗಿರಿ ಕೊನೆ

ಎಸ್ಎಸ್ಎಲ್ ಸಿ 2024ರ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.ಉಡುಪಿಗೆ ಪ್ರಥಮ ಸ್ಥಾನ ಲಭ್ಯವಾಗಿದೆ.8,59,967 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಅವರಲ್ಲಿ… Read More

May 9, 2024

ರೇವಣ್ಣ ಕೇಂದ್ರ ಕಾರಾಗೃಹಕ್ಕೆ ಶಿಪ್ಟ್ : 4567 ಖೈದಿ ಸಂಖ್ಯೆ ನೀಡಿಕೆ

ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್​ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More

May 8, 2024

SSLC ಫಲಿತಾಂಶ ಪರಿಶೀಲಿಸಲು ಸುಲಭ ಹಂತಗಳು : ವಿವರ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024

ಈಜು ಕಲಿಯಲು ಹೋದ 10 ವರ್ಷದ ಬಾಲಕ ನೀರುಪಾಲು

ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್‌ಕಲ್ ಮಲ್ಲಾಪೂರು… Read More

May 8, 2024

ನಾಳೆ ( May 9 ) SSLC ಫಲಿತಾಂಶ ಪ್ರಕಟ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024