ರಾಜ್ಯದ ವಿದ್ಯುತ್ ಸರಬರಾಜು ಕಂಪನಿಗಳು ಪ್ರತಿ ಯೂನಿಟ್ ದರವನ್ನು ಹೆಚ್ಚಿಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿರುವುದಾಗಿ ತಿಳಿದುಬಂದಿದೆ.
ಬೆಸ್ಕಾಂ ಸೇರಿದಂತೆ ರಾಜ್ಯದ ಎಲ್ಲಾ ವಿದ್ಯುತ್ ಸರಬರಾಜು ನಿಗಮಗಳು ಮುಂದಿನ ಮೂರು ವರ್ಷಗಳ ಅವಧಿಗೆ ವಿದ್ಯುತ್ ದರ ಹೆಚ್ಚಳವನ್ನು ಪ್ರಸ್ತಾಪಿಸಿ, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ (ಕೆಇಆರ್ ಸಿ) ಪ್ರಸ್ತಾವನೆ ಸಲ್ಲಿಸಿದ್ದಾಗಿ ಮೂಲಗಳು ತಿಳಿಸಿವೆ.ಇದನ್ನು ಓದಿ –ಚಳಿಗಾಲದ ಆಹಾರ ಪದ್ಧತಿಗಳು
ಪ್ರಸ್ತಾಪದ ಪ್ರಕಾರ, 2025-26ನೇ ಸಾಲಿನಲ್ಲಿ ಪ್ರತಿ ಯೂನಿಟ್ ವಿದ್ಯುತ್ ದರವನ್ನು 67 ಪೈಸೆ, 2026-27ರಲ್ಲಿ 75 ಪೈಸೆ, ಹಾಗೂ 2027-28ರಲ್ಲಿ 91 ಪೈಸೆಯಷ್ಟು ಹೆಚ್ಚಳ ಮಾಡುವುದಾಗಿ ಪ್ರಸ್ತಾವಿಸಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು