December 28, 2024

Newsnap Kannada

The World at your finger tips!

old mysuru , BJP Parva , CM

BJP Parva begins in Old Mysore Province - CM Bommai ಹಳೇ ಮೈಸೂರು ಪ್ರಾಂತದಲ್ಲಿ ಬಿಜೆಪಿ ಪರ್ವ ಆರಂಭ - ಸಿಎಂ ಬೊಮ್ಮಾಯಿ

ಪ್ರಾಥಮಿಕ ಶಾಲೆ ಆರಂಭ: ನಾಳೆ ಮಹತ್ವದ ಸಭೆ

Spread the love

ರಾಜ್ಯದಲ್ಲಿ 1 ರಿಂದ 8 ನೇ ತರಗತಿ ಆರಂಭಿಸುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಾಳೆ ಮಹತ್ವದ ಸಭೆ ನಡೆಯಲಿದೆ.ಕೊರೊನಾ ತೀವ್ರತೆ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಸಾಕಷ್ಟು ಕಡಿಮೆಯಾಗಿದೆ.

9 ರಿಂದ 12 ನೇ ತರಗತಿಗಳು ಈಗಾಗಲೇ ಆರಂಭವಾಗಿರುವ ಹಿನ್ನೆಲೆಯಲ್ಲಿ 1 ರಿಂದ 8 ನೇ ತರಗತಿಗಳು ಆರಂಭಿಸುವ ಬಗ್ಗೆ ಸರ್ಕಾರ ಸಕಾರಾತ್ಮಕ ತೀರ್ಮಾನ ತೆಗೆದುಕೊಳ್ಳಲಿದೆಯೇ ಎಂಬ ಕುತೂಹಲ ಸಾಕಷ್ಟು ಇದೆ.


ಮಕ್ಕಳು ಮತ್ತು ಪೋಷಕರು ಶಾಲೆ ಆರಂಭದ ಬಗ್ಗೆ ಉತ್ಸುಕತೆ ತೋರುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್, ತಾಂತ್ರಿಕ ಸಲಹಾ ಸಮಿತಿ ನಾಳಿನ ಸಭೆಯಲ್ಲಿ ಸೆಪ್ಟೆಂಬರ್ 1 ರಿಂದಲೇ ಆರಂಭಿಸುವಂತೆ ತಿಳಿಸಿದರೆ ಶಿಕ್ಷಣ ಇಲಾಖೆ ಸಿದ್ಧ ಎಂದೂ ಹೇಳಿದ್ದಾರೆ.


6 ರಿಂದ 8 ನೇ ತರಗತಿ ಆರಂಭಕ್ಕೆ ಗಮನ ನೀಡಿ ಕೆಲ ದಿನಗಳ ನಂತರ 1 ರಿಂದ 5 ನೇ ತರಗತಿಗೆ ಹಸಿರು ನಿಶಾನೆ ತೋರಲು ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಚಿಂತನೆ ನಡೆಸುತ್ತಿದ್ದಾರೆ ಎಂದು ಮೂಲಗಳು ಹೇಳಿವೆ.

Copyright © All rights reserved Newsnap | Newsever by AF themes.
error: Content is protected !!