ಚಾಮರಾಜನಗರ: ಬಂಡೀಪುರದ ಮದ್ದೂರು ವಲಯದಲ್ಲಿ ಅರಣ್ಯ ಇಲಾಖೆಯ ಹೊರಗುತ್ತಿಗೆ ನೌಕರನೊಬ್ಬ ಬ್ರೈನ್‌ಸ್ಟ್ರೋಕ್‌ನಿಂದ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.
ಮೃತನನ್ನು ಗೋಪಾಲಪುರದ ಮಹೇಶ್ ಎಂದು ಗುರುತಿಸಲಾಗಿದೆ. ಮಹೇಶ್ ಅವರು ಕಳೆದ 28 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ಹೊರಗುತ್ತಿಗೆ ನೌಕರನಾಗಿ ಸೇವೆ ಸಲ್ಲಿಸುತ್ತಿದ್ದರು. ಮದ್ದೂರು ಕಳ್ಳಬೇಟೆ ಶಿಬಿರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಬ್ರೈನ್‌ಸ್ಟ್ರೋಕ್ ಆಗಿದ್ದು, ತಕ್ಷಣ ಅವರನ್ನು ಗುಂಡ್ಲುಪೇಟೆ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.ಇದನ್ನು ಓದಿ –ಮುದ್ದುಲಕ್ಷ್ಮಿ ಸೀರಿಯಲ್ ನಟ ಚರಿತ್ ಬಾಳಪ್ಪ ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನ
ಮೃತನ ಕುಟುಂಬಕ್ಕೆ ಅರಣ್ಯ ಇಲಾಖೆ ನಿಯಮಾನುಸಾರ ಪರಿಹಾರ ನೀಡಲು ಸಾಧ್ಯವಿಲ್ಲ ಎಂದು ಅರಣ್ಯಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಈ ಸಂಬಂಧ ಅಸಮಾಧಾನಗೊಂಡ ಕುಟುಂಬಸ್ಥರು, ಮದ್ದೂರು ವಲಯದ ಅರಣ್ಯಾಧಿಕಾರಿ ಕಚೇರಿ ಮುಂದೆ ಮೃತನ ಶವವನ್ನು ಇಟ್ಟು ಪ್ರತಿಭಟನೆ ನಡೆಸಿದ್ದಾರೆ.
More Stories
ನಾಳೆಗಾಗಿ ಬಾಳಬೇಕು ಕೇಳು ನೊಂದ ಜೀವವೇ..!
ತುಪ್ಪ ಎಂಬ ಮಹಾ ಔಷಧಿ
ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು