ನವದೆಹಲಿ.
ಕೇಂದ್ರ ಸರ್ಕಾರ ಉದ್ಯೋಗ ನೇಮಕಾತಿಗೆ ತಡೆ ನೀಡಿದೆ ಎಂದು ಸಂಸದ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪವನ್ನು ಕೇಂದ್ರ ರಾಜ್ಯ ಖಾತೆ ವಿತ್ತ ಸಚಿವಾಲಯ ತಳ್ಳಿ ಹಾಕಿದೆ.
ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಆದೇಶ ಬಿಡುಗಡೆ ಮಾಡಿ, ನೇಮಕಾತಿ ಸಂಬಂಧಿಸಿದಂತೆ ಯಾವುದೇ ನಿರ್ಬಂಧ ಹೇರಿಲ್ಲ. ಯಾವುದೇ ತಡೆಯಾಜ್ಞೆಯನ್ನೂ ನೀಡಿಲ್ಲ. ನೇಮಕಾತಿಯ ಸಾಮಾನ್ಯ ಪ್ರಕ್ರಿಯೆಗಳನ್ನು ಸರ್ಕಾರಿ ಸಂಸ್ಥೆಗಳಾದ ಯುಪಿಎಸ್, ರೈಲ್ವೆ ಹಾಗೂ ಉದ್ಯೋಗ ನೇಮಕಾತಿ ಮಂಡಳಿಗಳು ಹುದ್ದೆಗಳನ್ನು ಭರ್ತಿ ಮಾಡುತ್ತಿವೆ. ಸೆ. 4ರ ಆದೇಶದಲ್ಲಿ ಸಾಮಾನ್ಯ ನೇಮಕಾತಿಯ ಪ್ರಕ್ರಿಯೆಗೆ ಯಾವುದೇ ಧಕ್ಕೆ ಯಾಗದಂತೆ ಅನಗತ್ಯವಾದ ಹುದ್ದೆಗಳ ಸೃಷ್ಠಿಯ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ