ಸಾರಿಗೆ ಮುಷ್ಕರ ಅಂತ್ಯ: ರಾಜ್ಯದಲ್ಲಿ ಬಸ್ ಸಂಚಾರ ಆರಂಭ

Team Newsnap
1 Min Read
Free bus pass - only up to 50 K.M from home ? ಉಚಿತ ಬಸ್ ಪಾಸ್ - ಮನೆಯಿಂದ 50 K.M ವರೆಗೆ ಮಾತ್ರ ?

ಸಾರಿಗೆ ಕೊನೆಗೂ ತಮ್ಮ ಮುಷ್ಕರವನ್ನು ಹಿಂದಕ್ಕೆ ಪಡೆದುಕೊಂಡು ಬಸ್ ಸಂಚಾರವನ್ನು ಆರಂಭಿಸಲಿದ್ದಾರೆ. ಆದರೆ ನೌಕರರ ಬೇಡಿಕೆ ಈಡೇರಿಕೆಗಾಗಿ ಫ್ರೀಡಂ ಪಾಕ್೯ ನಲ್ಲಿ ನಡೆಯುತ್ತಿರುವ ಮುಷ್ಕರ ಮುಂದುವರೆಯಲಿದೆ.

ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ ಸಾರಿಗೆ ನೌಕರರ ಮುಷ್ಕರ ವಾಪಸ್ ಪಡೆಯುತ್ತೇವೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಚಂದ್ರಶೇಖರ್, ನಾವು ಸರ್ಕಾರದ
ಒತ್ತಡಕ್ಕೆ ಮಣಿದಿಲ್ಲ. ಬದಲಿಗೆ ಸಾರ್ವಜನಿಕರ ಹಿತದೃಷ್ಟಿಯಿಂದ ಸಾರಿಗೆ ನೌಕರರ ಮುಷ್ಕರ ವಾಪಸ್ ಪಡೆಯುತ್ತೇವೆ. ಆದರೆ ಉಪವಾಸ ಸತ್ಯಾಗ್ರಹ ಮುಂದುವರೆಸುತ್ತೇವೆ. ಸಾರಿಗೆ ಮುಖಂಡರ ಜೊತೆ ಸಭೆ ನಡೆಸಿ ಮುಷ್ಕರ ವಾಪಸ್ ಪಡೆಯುತ್ತೇವೆ ಎಂದು ಹೇಳಿದ್ದಾರೆ.

ಫ್ರೀಡಂ ಪಾರ್ಕ್ ನಲ್ಲಿ ಮುಷ್ಕರ ವಾಪಸ್ ಪಡೆಯುವ ಬಗ್ಗೆ ಘೋಷಣೆ ಮಾಡುತ್ತೇವೆ. ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಖಂಡರ ಜೊತೆ ಚರ್ಚೆ ನಡೆಸಿ ಮುಷ್ಕರ ವಾಪಸ್ ಪಡೆಯುತ್ತೇವೆ ಎಂದು ಹೇಳಿದ್ದಾರೆ.

ಬಸ್ ಸಂಚಾರ ಆರಂಭ – 9 ಬೇಡಿಕೆ ಈಡೇರಿಕೆ – ಸಚಿವ ಸವದಿ

ಕಳೆದ ಮೂರು ದಿನಗಳಿಂದ ಸಂಚಾರ ಸ್ಥಗಿತಗೊಳಿಸಿ ಮುಷ್ಕರಕ್ಕೆ ಇಳಿದಿದ್ದ ಸಾರಿಗೆ ನೌಕರರು ಇಂದು ಬೆಳಗ್ಗೆ ಯಿಂದಲೇ ಕೆಲಸಕ್ಕೆ ಹಾಜರಾಗಿ ಬಸ್ ಸಂಚಾರಕ್ಕೆ ಚಾಲನೆ ನೀಡಿದರು.
ರಾಜ್ಯದ ಅನೇಕ ಭಾಗದಲ್ಲಿ ಬಸ್ ಸಂಚಾರ ಸುಗಮವಾಗುತ್ತಿದೆ ಎಂದು ಸಾರಿಗೆ ಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.

ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಲು ಸಾಧ್ಯವಿಲ್ಲ. ಆದರೆ ಉಳಿದೆಲ್ಲಾ 9 ಬೇಡಿಕೆಗಳನ್ನು ಸಹಾನುಭೂತಿ ಪರಿಶೀಲನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Share This Article
Leave a comment