ಹಿಜಬ್-ಕೇಸರಿ ಶಾಲು ಸಂಘರ್ಷದ ನಡುವೆ ಸೋಮವಾರ ರಾಜ್ಯಾದ್ಯಂತ ಆರಂಭವಾದ ಶಾಲೆಗಳಲ್ಲಿ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಹಿಜಬ್ ಧರಿಸಿಯೇ ಮಕ್ಕಳು ಶಾಲೆಗೆ ಆಗಮಿಸಿ ಹೈಕೋರ್ಟ್ ಆದೇಶವನ್ನು ಧಿಕ್ಕರಿಸಿದ್ದಾರೆ.
ಸಮವಸ್ತ್ರ ಧರಿಸಿಯೇ ಶಾಲೆಗೆ ಬರುವಂತೆ ಹೈಕೋರ್ಟ್ ಆದೇಶ ನೀಡಿತ್ತು.
ಈ ಬೆನ್ನಲ್ಲೆ ಸರ್ಕಾರ ಕೂಡ ಸೂಚನೆ ನೀಡಿತ್ತು. ಈ ಎಲ್ಲದರ ನಡುವೆಯೇ ಬೆಂಗಳೂರು, ಮೈಸೂರು, ಬೆಳಗಾವಿ, ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳು ಹಿಜಬ್ ಧರಿಸಿ ಶಾಲೆಗೆ ಆಗಮಿಸಿದ್ದಾರೆ.
ವಿದ್ಯಾರ್ಥಿನಿಯರು ತಮ್ಮ ಜೊತೆಗೆ ಷೋಷಕರನ್ನು ಕೂಡ ಶಾಲೆಗೆ ಕರೆತಂದಿದ್ದಾರೆ. ಸರ್ಕಾರದ ಆದೇಶದಂತೆ ಶಾಲಾ ಸಿಬ್ಬಂದಿ ಹಿಜಬ್ ತೆಗೆಸಿ ಕ್ಲಾಸ್ ರೂಮ್‍ಗೆ ಕಳುಹಿಸಿದ್ದಾರೆ
ಬೆಂಗಳೂರಿನ ಚಂದ್ರಾಲೇಔಟ್‍ನ ವಿದ್ಯಾಸಾಗರ ಶಾಲೆಯಲ್ಲಿ ಹಿಜಬ್ ವಿವಾದ ಇಂದಿನಿಂದ ಆರಂಭಗೊಂಡಿದೆ.
ಶಾಲೆಗೆ ಹಿಜಬ್ ಧರಿಸಿ ವಿದ್ಯಾರ್ಥಿನಿಯರು ಆಗಮಿಸಿದ್ದಾರೆ. ಈ ವೇಳೆ ಹಿಜಬ್ ಧರಿಸಿ ಕ್ಲಾಸ್ ರೂಮ್‌ಗೆ ಅವಕಾಶ ಇಲ್ಲ ಎಂದು ಆಡಳಿತ ಮಂಡಳಿ ಶಾಲೆಯ ಅವರಣದೊಳಗೆ ಮಾತ್ರ ಅವಕಾಶ ಮಾಡಿಕೊಟ್ಟಿತು.
- ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ದಂಪತಿ
- 2024-25ನೇ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ
- 10ನೇ ತರಗತಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಅವಕಾಶ
- HMPV ವೈರಸ್ ಕರ್ನಾಟಕಕ್ಕೆ ಪ್ರವೇಶ: ಬೆಂಗಳೂರಿನಲ್ಲಿ 8 ತಿಂಗಳ ಮಗುವಿಗೆ ಸೋಂಕು ದೃಢ
- ಮಳೆ ನಿಂತರೂ ಮರದ ಹನಿ ನಿಲ್ಲದು
More Stories
ಕಾನ್ಸ್ಟೇಬಲ್ ನೇಮಕಾತಿ ದೈಹಿಕ ಪರೀಕ್ಷೆ: ಓಟದ ವೇಳೆ ಬಿದ್ದ ಯುವಕನ ದುರ್ಮರಣ
ಸಂಕ್ರಾಂತಿ ಬಳಿಕ ಬಸ್ ಟಿಕೆಟ್ ದರ ಏರಿಕೆ ಸಾಧ್ಯತೆ
ಹೊಸ ವರ್ಷದ ಸಂಭ್ರಮ: KSBCLನಿಂದ ಒಂದೇ ದಿನ 308 ಕೋಟಿ ರೂ. ಮದ್ಯ ಮಾರಾಟ