ಶೀಘ್ರದಲ್ಲೇ ಉಚಿತ ಮರಳು ನೀತಿ ಜಾರಿ – ನಿರಾಣಿ ಪ್ರಕಟ

Team Newsnap
2 Min Read
  • ಬಡವರಿಗೆ 100ರಿಂದ 200 ರು. ಗೆ ಒಂದು ಟನ್ ಮರಳು
  • ಗ್ರಾಮಪಂಚಾಯ್ತಿಯಿಂದ ನಗರಸಭೆವರೆಗೂ ಸೌಲಭ್ಯ

ರಾಜ್ಯದಲ್ಲಿ ಬಡವರು ಹಾಗೂ ಜನ ಸಾಮಾನ್ಯರು 10 ಲಕ್ಷ ರುಗಳ ಒಳಗೆ ಮನೆ ಕಟ್ಟಲು ಅನುಕೂಲವಾಗುವಂತೆ ಶೀಘ್ರದಲ್ಲೇ ನೂತನ ಉಚಿತ ಮರಳು ನೀತಿಯನ್ನು ಜಾರಿಗೆ ತರಲಿದ್ದೇವೆ.

ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ವಿಧಾನಸಭೆಯಲ್ಲಿ ಶುಕ್ರವಾರ ಪ್ರಕಟಿಸಿದರು.

ಅಧಿವೇಶನದಲ್ಲಿ ಪ್ರಶ್ನೋತ್ತರ ವೇಳೆ ಶಾಸಕ ಸಿ.ಎನ್.ಬಾಲಕೃಷ್ಣ ಪ್ರಶ್ನೆಗೆ ಉತ್ತರಿಸಿದ ನಿರಾಣಿ, ಮರಳು ಸಮಸ್ಯೆಯನ್ನು ನೀಗಿಸುವ ನಿಟ್ಟಿನಲ್ಲಿ ನಮ್ಮ ಇಲಾಖೆ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದರು.‌

ಸಚಿವರು ಹೇಳಿದ ಇತರ ಪ್ರಮುಖ ಅಂಶಗಳು:

  • ಆಶ್ರಯ ಮನೆ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಾಣವಾಗುವ 10 ಲಕ್ಷದೊಳಗಿನ ಮನೆಗೆ 100ರಿಂದ 200 ರೂ.ಗೆ ಒಂದು ಟನ್ ದರದಲ್ಲಿ ಪೂರೈಕೆ ಮಾಡುವ ಉಚಿತ ಮರಳು ನೀತಿಯನ್ನು ಜಾರಿಗೆ ಮಾಡುತ್ತೇವೆ ಎಂದು ಪ್ರಕಟಿಸಿದರು.
  • ಸರ್ಕಾರದಿಂದಲೇ ಉಚಿತವಾಗಿ ಮರಳು ಪೂರೈಕೆ ಮಾಡುವ ಯೋಜನೆ ಇದೆ. ಗ್ರಾಮ ಪಂಚಾಯಿತಿಯಿಂದ ನಗರಸಭೆ ವ್ಯಾಪ್ತಿಯಲ್ಲಿ ಮನೆ ನಿರ್ಮಾಣ ಮಾಡುವವರೆಗೆ ಇದು ಅನುಕೂಲವಾಗಲಿದೆ.
  • ಈಗಾಗಲೇ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಳ್ಳ, ತೊರೆ ಮತ್ತಿತರ ಕಡೆ ಎತ್ತಿನಗಾಡಿ ಮೂಲಕ ಮರಳು ಸಾಗಿಸಲು ಅವಕಾಶ ಕಲ್ಪಿಸಿದ್ದೇವೆ. ಪ್ರಸ್ತುತ ರಾಜ್ಯದ 193 ಮರಳು ನಿಕ್ಷೇಪ ಪ್ರದೇಶಗಳನ್ನು ಗುರುತಿಸಿ 87 ಬ್ಲಾಕ್‍ಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ
  • ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ 46 ಹಾಗೂ ಹಟ್ಟಿ ಚಿನ್ನದ ಗಣಿಶ್ರೇಣಿಯ 43 ಮರಳು ಬ್ಲಾಕ್‍ಗಳಲ್ಲಿ ಗಣಗಾರಿಕೆ ನಡೆಸಲು ಆಯಾ ಜಿಲ್ಲಾ ಮರಳು ಸಮಿತಿಗಳಿಂದ ಅಧಿಸೂಚನೆ ಹೊರಡಿಸಲಾಗಿದೆ

Share This Article
Leave a comment