ಇಂದಿನಿಂದ ಆರಂಭವಾಗಬೇಕಿದ್ದ ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ಪರೀಕ್ಷೆಗಳನ್ನು ಮುಂದಕ್ಕೆ ಹಾಕಲಾಗಿದೆ.
ಈ ಬಗ್ಗೆ ಹೇಳಿಕೆ ನೀಡಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ರಾಜ್ಯಾದ್ಯಂತ ಏಪ್ರಿಲ್ 27ರ ರಾತ್ರಿಯಿಂದ 14 ದಿನ ‘ಕೊರೋನಾ ಕರ್ಫ್ಯೂ’ ಜಾರಿಯಲ್ಲಿದೆ. ಈ ಕಾರಣಕ್ಕಾಗಿ ಎಂಜಿನಿಯರಿಂಗ್, ಪಾಲಿಟೆಕ್ನಿಕ್‌ನ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಪರೀಕ್ಷೆಗಳು ಯಾವಾಗ ನಡೆಯುತ್ತವೆ ಎಂಬುದನ್ನು ಕೊರೋನಾ ಕರ್ಫ್ಯೂ ಮುಗಿದ ನಂತರ ತಿಳಿಸಲಾಗುವುದು. ಎಂದಿದ್ದಾರೆ.
ವಿಟಿಯು ಪರೀಕ್ಷೆಗಳೂ ಮುಂದಕ್ಕೆ
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು)ದಿಂದ ಏ.27ರಿಂದ ನಿಗದಿಯಾಗಿದ್ದ ಪರೀಕ್ಷೆಗಳನ್ನು ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣದಿಂದ ಮುಂದೂಡಲಾಗಿದೆ ವಿ ವಿ ಪ್ರಕಟನೆ ತಿಳಿಸಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು