ಆರ್‌ಸಿಬಿ ತಂಡಕ್ಕೆ ಕನ್ನಡದಲ್ಲಿ ಟ್ವೀಟ್ ಮಾಡಿ ಹುರಿದುಂಬಿಸಿದ ಇಂಗ್ಲೆಂಡ್ ಆಟಗಾರ್ತಿ ಕನ್ನಡಿಗರ ಹೃದಯ ಗೆದ್ದಿದ್ದಾರೆ.
ಐಪಿಎಲ್‍ನಲ್ಲಿ ತಮ್ಮದೇ ಆದ ಫ್ಯಾನ್ ಫಾಲೋವರ್ಸ್ ಹೊಂದಿರುವ ತಂಡ ಆರ್‌ಸಿಬಿ. ಪ್ರತಿ ಬಾರಿ ಕಪ್ ಗೆಲ್ಲಲು ವಿಫಲವಾಗುತ್ತಿದೆ. ಆದರೂ ಆರ್‌ಸಿಬಿಯ ಕಟ್ಟಾ ಅಭಿಮಾನಿ ಇಂಗ್ಲೆಂಡ್ ಮಹಿಳಾ ತಂಡದ ಆಟಗಾರ್ತಿ ಅಲೆಕ್ಸಾಂಡ್ರಾ ಹಾರ್ಟ್ಲಿ ಕನ್ನಡದಲ್ಲಿ ಟ್ವೀಟ್ ಮಾಡುವ ಮೂಲಕ ಆರ್‌ಸಿಬಿ ತಂಡಕ್ಕೆ ಹುರಿದುಂಬಿಸಿದ್ದಾರೆ.
ಅಲೆಕ್ಸಾಂಡ್ರಾ ಹಾರ್ಟ್ಲಿ ಕನ್ನಡದಲ್ಲೇ ಟ್ವೀಟ್ ಮಾಡಿರುವುದು ಆರ್‌ಸಿಬಿ ಅಭಿಮಾನಿಗಳಿಗೆ ಸಂತಸ ಮೂಡಿಸಿದೆ., ಅವರ ಟ್ವೀಟ್ ಅನ್ನು ಸಾವಿರಾರು ಜನ ಲೈಕ್ ಮತ್ತು ರೀಟ್ವೀಟ್ ಮಾಡಿದ್ದಾರೆ. ಇದಕ್ಕೂ ಮಿಗಿಲಾಗಿ ಈ ಒಂದು ಟ್ವೀಟ್‍ನಿಂದಾಗಿ ಅಲೆಕ್ಸಾಂಡ್ರಾ ಹಾರ್ಟ್ಲಿ ಕನ್ನಡಿಗರ ಮನಗೆದ್ದಿದ್ದಾರೆ.
14ನೇ ಆವೃತ್ತಿಯ ಮೊದಲ ಪಂದ್ಯವನ್ನು ಭರ್ಜರಿಯಾಗಿ ಗೆಲ್ಲುವ ಮೂಲಕ ಹೊಸ ಹುರುಪಿನೊಂದಿಗಿದೆ. ಆರ್‌ಸಿಬಿ ಇಂದು ಹೈದರಾಬಾದ್ ತಂಡದ ವಿರುದ್ಧ ಎರಡನೇ ಪಂದ್ಯವಾಡುತ್ತಿದೆ. ಈ ಪಂದ್ಯಕ್ಕೂ ಮೊದಲು ಇಂಗ್ಲೆಂಡ್ ಆಟಗಾರ್ತಿ ತಂಡಕ್ಕೆ ‘ಈ ಸಲ ಕಪ್ ನಮ್ದೇ’ ಎಂದು ಬರೆದು ರೆಡ್ ಹಾರ್ಟ್ ಎಮೋಜಿಯನ್ನು ಹಾಕಿಕೊಂಡಿದ್ದಾರೆ.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
More Stories
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್