ಭಾರತದಲ್ಲಿ ಇಂಗ್ಲೆಂಡ್ ತಂಡದ ಪ್ರವಾಸ: ಫೆ. 5 ರಂದು ಮೊದಲ ಟೆಸ್ಟ್ ‌

Team Newsnap
1 Min Read

ಟೀಂ ಇಂಡಿಯಾ ಸದ್ಯ ಮತ್ತೊಂದು ದೊಡ್ಡ ಸರಣಿಗೆ ರೆಡಿಯಾಗುತ್ತಿದೆ. ಇಂಗ್ಲೆಂಡ್ ತಂಡ ಭಾರತ ಪ್ರವಾಸ ಕೈಗೊಳ್ಳುತ್ತಿದೆ.

ಈ ಸುದೀರ್ಘ ಸರಣಿಯಲ್ಲಿ 4 ಟೆಸ್ಟ್ ಪಂದ್ಯ, 5 ಟಿ-20 ಪಂದ್ಯಗಳು ಮತ್ತು 3 ಪಂದ್ಯಗಳ ಏಕದಿನ ಸರಣಿ ನಡೆಯಲಿದೆ.

ಫೆಬ್ರವರಿ 5 ರಿಂದ ಚೆನ್ನೈನ ಎಂ. ಚಿದಂಬರಂ ಸ್ಟೇಡಿಯಂನಲ್ಲಿ ಮೊದಲ ಟೆಸ್ಟ್​ ಪಂದ್ಯ ಆರಂಭವಾಗಲಿದೆ. ಆದರೆ, ಈ ಹೈವೋಲ್ಟೇಜ್ ಪಂದ್ಯ ವೀಕ್ಷಣೆಗೆ ಕಾದುಕುಳಿತಿದ್ದ ಅಭಿಮಾನಿಗಳಿಗೆ ಭಾರೀ ನಿರಾಸೆ ಉಂಟಾಗಿದೆ. ಕಾರಣ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೊದಲ ಎರಡು ಟೆಸ್ಟ್ ಪಂದ್ಯಗಳು ಪ್ರೇಕ್ಷಕರಿಲ್ಲದೆ ಖಾಲಿ ಸ್ಟೇಡಿಯಂನಲ್ಲಿ ನಡೆಯಲಿವೆ ಎಂದು ತಮಿಳುನಾಡು ಕ್ರಿಕೆಟ್ ಸಂಸ್ಥೆ (ಟಿಎನ್‌ಸಿಎ) ಪ್ರಕಟಿಸಿದೆ.

ಕೊರೋನಾ ವೈರಸ್ ಭೀತಿಯಿಂದಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಈ ಮೊದಲೇ ಬಿಸಿಸಿಐ ಎಸ್‌ಒಪಿ ಸಿದ್ಧಪಡಿಸಿತ್ತು. ಬಿಸಿಸಿಐ ಮಾರ್ಗಸೂಚಿಯಂತೆ ಪ್ರೇಕ್ಷಕರಿಗೆ ಪಂದ್ಯ ವೀಕ್ಷಿಸಲು ಅನುಮತಿ ನೀಡಲಾಗುತ್ತಿಲ್ಲ” ಎಂದು ಟಿಎನ್‌ಸಿಎ ಕಾರ್ಯದರ್ಶಿ ಆರ್.ಎಸ್ ರಾಮಸ್ವಾಮಿ ತಿಳಿಸಿದ್ದಾರೆ.

ಪಂದ್ಯಗಳು ಎಲ್ಲೆಲ್ಲಿ?

  • ಫೆಬ್ರವರಿ 5 ರಿಂದ ಚೆನ್ನೈನಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವೆ ಮೊದಲ ಟೆಸ್ಟ್ ಪಂದ್ಯ ಚೆನ್ನೈ ನಲ್ಲಿ ನಡೆಯಲಿದೆ
  • ಫೆ.13 ರಿಂದ 17 ರ ವರೆಗೆ 2ನೇ ಪಂದ್ಯ ನಡೆಯಲಿದೆ. ಫೆಬ್ರವರಿ 24 ರಿಂದ 28 ವರೆಗೆ ಅಹಮದಾಬಾದ್​ನಲ್ಲಿ ಯಲಿದೆ
  • 3ನೇ ಟೆಸ್ಟ್ ಮತ್ತು ಮಾರ್ಚ್ 4 ರಿಂದ 8 ವರೆಗೆ ಅಂತಿಮ ಟೆಸ್ಟ್ ಪಂದ್ಯ ನಡೆಯಲಿದೆ.
  • ಅಹಮದಾಬಾದ್‌ನಲ್ಲಿ ಐದು ಪಂದ್ಯಗಳ ಟಿ-20 ಸರಣಿ ಮತ್ತು ಪುಣೆಯಲ್ಲಿ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ.

ಭಾರತ ತಂಡ ಸದಸ್ಯರ ವಿವರ:

ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ, ಶುಭ್ಮನ್ ಗಿಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ, ರಿಷಭ್ ಪಂತ್, ವೃದ್ಧಿಮಾನ್ ಸಹಾ, ಹಾರ್ದಿಕ್ ಪಾಂಡ್ಯ, ಕೆ. ಎಲ್ ರಾಹುಲ್, ಜಸ್‌ಪ್ರೀತ್ ಬುಮ್ರಾ, ಇಶಾಂತ್ ಶರ್ಮಾ, ಮೊಹಮ್ಮದ್ ಸಿರಾಜ್, ಆರ್‌. ಅಶ್ವಿನ್, ಶಾರ್ದುಲ್ ಠಾಕೂರ್, ಕುಲ್ದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್.

Share This Article
Leave a comment