ಉಕ್ರೇನ್‌ನಿಂದ ಮರಳಿದ ವಿದ್ಯಾರ್ಥಿಗಳಿಗೆ Deemd V V ಗಳಲ್ಲಿ ಪ್ರವೇಶ: ಡೀಮ್ಡ್ ಅಧ್ಯಕ್ಷ

Team Newsnap
0 Min Read

ಯದ್ಧಪೀಡಿತ ಉಕ್ರೇನ್‌ನಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ಹೋಗಿ ವಾಪಸ್ಸಾಗಿರುವ ಭಾರತೀಯ ವೈದ್ಯ ವಿದ್ಯಾರ್ಥಿಗಳಿಗೆ ರಾಜ್ಯದ ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ ನೀಡಲಾಗುತ್ತದೆ. ಈ ವಿಷಯವನ್ನು ಡೀಮ್ಡ್ ವಿಶ್ವವಿದ್ಯಾಲಯಗಳ ಒಕ್ಕೂಟ ಅಧ್ಯಕ್ಷ ಡಾ. ಪ್ರಭಾಕರ್ ಕೋರೆ ತಿಳಿಸಿದರು.

ಉಕ್ರೇನ್‌ನಲ್ಲಿ ಯುದ್ಧ ಆರಂಭವಾದ ಹಿನ್ನೆಲೆಯಲ್ಲಿ ಎಂಬಿಬಿಎಸ್ ಶಿಕ್ಷಣ ಅರ್ಧಕ್ಕೆ ತೊರೆದು ಬಂದಿರುವ ಭಾರತೀಯ ವೈದ್ಯ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಮುಂದುವರಿಸಲು ಅವಕಾಶ ನೀಡಲಾಗುತ್ತದೆ ಎಂದರು.

ಉಕ್ರೇನ್ ಹಾಗೂ ರಷ್ಯಾ ಯುದ್ಧದಿಂದ ಸಾವಿರಾರು ಭಾರತೀಯ ವೈದ್ಯ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದೆಂಬ ಕಾರಣಕ್ಕೆ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಅವಕಾಶ ನೀಡಲಾಗುತ್ತಿದೆ ಎಂದಿದ್ದಾರೆ.

Share This Article
Leave a comment