Main News

ಶಿರಾ ಚುನಾವಣೆ ಗೆಲುವಿನ ಟ್ರಂಪ್ ಕಾಡ್೯ ಬಿಎಸ್‌ವೈ ಪುತ್ರ ಎಂಟ್ರಿ

ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ವಿಧಾನಸಭಾ ಚುಣಾವಣೆಯಲ್ಲಿ ಬಿಜೆಪಿ ಗೆಲುವಿಗೆ ಕಾರಣರಾದ ಮಾಸ್ಟರ್ ಮೈಂಡ್ ಬಿಎಸ್‌ವೈ ಪುತ್ರ ಬಿ.ವೈ. ವಿಜಯೇಂದ್ರ ಶಿರಾದಲ್ಲಿ‌ ನಡೆಯುವ ಉಪ ಚುಣಾವಣಾ ಪ್ರಚಾರಕ್ಕೆ ಎಂಟ್ರಿ‌ ನೀಡಲಿದ್ದಾರೆ.

ಶಿರಾದಲ್ಲಿ‌ ಉಪಚುಣಾವಣೆ ಘೋಷಣೆಯಾಗುವ ಮೊದಲೇ ಕ್ಷೇತ್ರದಲ್ಲಿ ಒಂದು ಬಾರಿ‌ಸುತ್ತು ಹಾಕಿ ಇತರ ಪಕ್ಷಗಳ ಮುಖಂಡರನ್ನು ವಿಜಯೇಂದ್ರ ಸೆಳೆದಿದ್ದರು. ಬಿಜೆಪಿಗೆ ವಿಜಯೇಂದ್ರ ಟ್ರಂಪ್ ಕಾಡ್ ೯ ರೀತಿಯಲ್ಲಿ ಈಗ ಅವರು ಪ್ರಚಾರಕ್ಕೆ ಧುಮುಕಲಿದ್ದಾರೆ. ಇದರಿಂದ ಶಿರಾದ ಕಮಲ ಪಾಳಯದಲ್ಲಿ ಹೊಸ ಉತ್ಸಾಹ ಮೂಡಿದಂತಾಗಿದೆ.

ವಿಜಯೇಂದ್ರ ಅವರು ಶಿರಾ ಕ್ಷೇತ್ರದ ಉಸ್ತುವಾರಿ ತಂಡದ ಸದಸ್ಯರೂ ಆಗಿದ್ದಾರೆ. ವಿಜಯೇಂದ್ರ ಪ್ರಚಾರ ತಂತ್ರದಿಂದಲೇ‌ ಕೆ.ಆರ್. ಪೇಟೆಯಲ್ಲಿ ಕಮಲ‌ ಅರಳಿತ್ತು. ಈಗ ಮೊಟ್ಟ ಮೊದಲ ಬಾರಿಗೆ ಶಿರಾ ಕ್ಷೇತ್ರದಲ್ಲಿ ಕಮಲ ಅರಳಿಸುವ ಪ್ರಯತ್ನದಲ್ಲಿದ್ದಾರೆ ವಿಜಯೇಂದ್ರ.

2018ರ ಚುಣಾವಣೆಯಲ್ಲಿ‌ ಚಾಮರಾಜ‌ನಗರ ಹಾಗೂ ಮೈಸೂರಿನಲ್ಲಿ‌ನ ತಮ್ಮ ಪ್ರಚಾರದ ಮೂಲಕ ಬಿಜೆಪಿಯಲ್ಲಿ ಹೊಸ ಭರವಸೆ ಮೂಡಿಸಿದ್ದರು. ಬಿಜೆಪಿ ಗೆಲ್ಲಲು ಅಸಾಧ್ಯ ಎಂಬಂತಹ ಕೆ.ಆರ್.ಪೇಟೆ ಕ್ಷೇತ್ರದಲ್ಲಿ‌ ಬಿಜೆಪಿ ಅಧಿಕಾರಕ್ಕೆ ಬರಲು ರೂವಾರಿಗಳಾಗಿದ್ದರು. ಇಷ್ಟು ವರ್ಷಗಳವರೆಗೆ ಶಿರಾ ಕ್ಷೇತ್ರದಲ್ಲಿ‌ ಕಾಂಗ್ರೆಸ್ ಅಥವಾ ಜೆಡಿಎಸ್ ಬಿಟ್ಟು ‌ಬೇರೆ ಪಕ್ಷ ಅಧಿಕಾರಕ್ಕೆ ಬಂದಿಲ್ಲ.‌ ಈ ಬಾರಿಯ ಉಪ ಚುಣಾವಣೆಯಲ್ಲಾದರೂ ಬಿಜೆಪಿಯ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂಬ ಆಶಯ ಕಮಲ ಪಾಳಯದ್ದು. ಹಾಗಾಗಿಯೇ ವಿಜಯೇಂದ್ರ ಅವರನ್ನು ಪ್ರಚಾರ ಕಣಕ್ಕಿಳಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಈಗಾಗಲೇ ಬಿಜೆಪಿ ಅಭ್ಯರ್ಥಿ ಡಾ. ರಾಜೇಶ್ ಗೌಡ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.‌ ನಾಮಪತ್ರ ಸಲ್ಲಿಸಲು ಅಕ್ಟೋಬರ್ 16 ಕೊನೆಯ ದಿನಾಂಕ. ನಾಳೆಯಿಂದ ಪ್ರಚಾರ ಆರಂಭವಾಗಲಿದೆ. ವಿಜಯೇಂದ್ರ ಅವರು ಕೆಲ ದಿನಗಳ ಕಾಲ ಶಿರಾದಲ್ಲೇ ವಾಸ್ತವ್ಯ ಹೂಡಿ ಪ್ರಚಾರ ತಂತ್ರಗಳ ಬಗ್ಗೆ ಆಲೋಚಿಸಿ ಪ್ರಚಾರವನ್ನು ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.

Team Newsnap
Leave a Comment
Share
Published by
Team Newsnap
Tags: ಶಿರಾ

Recent Posts

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 20 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,400 ರೂಪಾಯಿ ದಾಖಲಾಗಿದೆ. 24… Read More

May 20, 2024

ಪೆನ್ ಡ್ರೈವ್ ಹೊಳೆಯಲ್ಲಿ ಕೊಚ್ಚಿ ಹೋಗುತ್ತಿದೆ ರಾಜ್ಯದ ಅಭಿವೃದ್ಧಿ

ಪ್ರಕರಣದಿಂದ ಸ್ವಾರ್ಥ ರಾಜಕಾರಣಿಗಳಿಗೆ, ಕೆಲ ಮಾಧ್ಯಮಗಳಿಗೆ, ಗಂಜಿ ಗಿರಾಕಿಗಳಿಗೆ ಮಾತ್ರ ಲಾಭ ?! ಬರಗಾಲದಿಂದ ರಾಜ್ಯದಲ್ಲಿ ಆಗಿರುವ ಅನಾಹುತ ,… Read More

May 20, 2024

ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ

ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More

May 19, 2024

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024