ಶಿವಮೊಗ್ಗ : ಶಿವಮೊಗ್ಗದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಕೆ ಎಸ್ ಈಶ್ವರಪ್ಪ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.
ಪಕ್ಷದ ಸೂಚನೆಯನ್ನು ಧಿಕ್ಕರಿಸಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪಕ್ಷಕ್ಕೆ ಮುಜುಗರ ತಂದಿದ್ದೀರಿ. ಆದ್ದರಿಂದ ತಕ್ಷಣಕ್ಕೆ ಜಾರಿಗೆ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ 6 ವರ್ಷ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ.
ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
ನಾಮಪತ್ರ ಹಿಂದಕ್ಕೆ ಪಡೆಯುವಂತೆ ಬಿಜೆಪಿ ನಾಯಕರು ಈಶ್ವರಪ್ಪ ಅವರನ್ನು ಮನ ಒಲಿಸುವ ಪ್ರಯತ್ನ ಮಾಡಿದ್ದರು. ಆದರೆ ಈಶ್ವರಪ್ಪ ಕಣದಿಂದ ಹಿಂದಕ್ಕೆ ಸರಿಲಿಲ್ಲ. ಇಂದು ನಾಮಪತ್ರ ಹಿಂದಕ್ಕೆ ಪಡೆಯಲು ಕೊನೆಯ ದಿನವಾಗಿತ್ತು.ನೇಹಾ ಹತ್ಯೆ ಪ್ರಕರಣ ಸಿಐಡಿಗೆ ವರ್ಗಾವಣೆ : ರಾಜ್ಯ ಸರ್ಕಾರದಿಂದ ಘೋಷಣೆ
ಇಂದು ನಾಮಪತ್ರವನ್ನು ಹಿಂದಕ್ಕೆ ಪಡೆಯದ ಕಾರಣ ಬಿಜೆಪಿ ಅವರನ್ನು ಪಕ್ಷದಿಂದ ಉಚ್ಚಾಟಿಸಿದೆ.
More Stories
ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
MUDA ಹಗರಣ: ಜೆಡಿಎಸ್ ಶಾಸಕ ಜಿಟಿಡಿ ವಿರುದ್ಧ ಕಿಕ್ಬ್ಯಾಕ್ ಆರೋಪ, ಲೋಕಾಯುಕ್ತದಲ್ಲಿ ದೂರು
ನಕಲಿ ಸಿಗರೇಟ್ ತಯಾರಿಸಿ ಮಾರಾಟ – ಕೋಟಿ ಮೌಲ್ಯದ ಸಿಗರೇಟ್ ವಶ