ಚುನಾವಣಾ ರಾಜಕೀಯಕ್ಕೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹಾಗೂ ಹಾಲಾಡಿ ಶ್ರೀನಿವಾಸ ಶೆಟ್ಟಿ,ದಾವಣಗೆರೆ ಉತ್ತರ ಕ್ಷೇತ್ರದ ಶಾಸಕ ಎಸ್ ಎ ರವೀಂದ್ರ ನಾಥ್ ಅವರು ಸ್ವಯಂ ನಿವೃತ್ತಿ ಘೋಷಣೆ ಮಾಡಿದ್ದಾರೆ.
ಮಹತ್ವದ ಬೆಳವಣಿಗೆಯಲ್ಲಿ ಜೆ.ಪಿ ನಡ್ಡಾಗೆ ಪತ್ರ ಬರೆದಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ‘ರಾಜಕೀಯ ನಿವೃತ್ತಿ’ ಘೋಷಣೆ ಮಾಡಿದ್ದಾರೆ.
ಚುನಾವಣಾ ಸ್ಪರ್ಧೆಯಿಂದ ಹೊರಗುಳಿಯುವ ಅವರ ನಿರ್ಧಾರದ ಹಿಂದಿನ ಕಾರಣಗಳು ಇನ್ನೂ ಸ್ಪಷ್ಟವಾಗಿಲ್ಲ. ವಯಸ್ಸಾಗಿರುವ ಕಾರಣಕ್ಕೆ ಈ ಬಾರಿ ಈಶ್ವರಪ್ಪನವರಿಗೆ ಟಿಕೆಟ್ ನೀಡಲಾಗುವುದು ದಿಲ್ಲ ಎನ್ನಲಾಗುತಿತ್ತು. ಇನ್ನೂ ಶಿವಮೊಗ್ಗದಿಂದ ತಮ್ಮ ಪುತ್ರ ಕಾಂತೇಶ್‌ಗೆ ಈಶ್ವರಪ್ಪ ಕೇಳಿದ್ದು, ಮತ್ತೊಂಡು ಕಡೆ ಅಯನೂರ ಮಂಜುನಾಥ್ ಕೂಡ ಬಿಜೆಪಿಯಿಂದ ಟಿಕೇಟ್ ಕೇಳಿದ್ದು, ಶಿವಮೊಗ್ಗ ನಗರ ವಿಧಾನಸಭಾ ಚುನಾವಣೆ ಈ ಬಾರಿ ಎಲ್ಲರ ಗಮನ ಸೆಳೆದಿದೆ.
ವಿಧಾನಸಭೆ ಚುನಾವಣೆ ಘೋಷಣೆ ಬೆನ್ನಲ್ಲೇ ಕೆ.ಎಸ್ ಈಶ್ವರಪ್ಪ ‘ರಾಜಕೀಯ ನಿವೃತ್ತಿ’ ಘೋಷಣೆ ಮಾಡಿದ್ದು, ಹಲವು ಅಚ್ಚರಿಗೆ ಕಾರಣವಾಗಿದೆ.
ನಾನು ಸ್ವಇಚ್ಚೆಯಿಂದ ಚುನಾವಣೆಗೆ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ , ನಾನು ಇನ್ನು ಮುಂದೆ ಯಾವುದೇ ರೀತಿಯಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದು ಪತ್ರ ಬರೆದಿದ್ದಾರೆ.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ