ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಮುಂಜಾನೆ ಮಾಜಿ ಸಚಿವ ಈಶ್ವರಪ್ಪ ಅವರಿಗೆ ದೂರವಾಣಿ ಕರೆ ಮಾಡಿ ಕುಶಲೋಪರಿ ವಿಚಾರಿಸಿದರು.
ಈಶ್ವರಪ್ಪನವರ ರಾಜಕೀಯ ನಡೆ ಬಗ್ಗೆ ಪ್ರಶಂಸೆ ಮಾಡಿದ್ದಾರೆ ಎನ್ನಲಾಗಿದೆ.ಈಶ್ವರಪ್ಪ ಅವರ ಪಕ್ಷ ನಿಷ್ಠೆ ಮೆಚ್ಚಿ ಸ್ವತಃ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ದೂರವಾಣಿ ಕರೆ ಮಾಡಿ ಪ್ರಶಂಸೆ ವ್ಯಕ್ತಪಡಿಸಿದರು. ಶಿವಮೊಗ್ಗ ವಿಧಾನಸಭಾ ಚುನಾವಣೆಯ ಬಗ್ಗೆ ಚರ್ಚೆ ನಡೆಸಿದರು.
ನೀವು ಬಿ.ಎಸ್ ಯಡಿಯೂರಪ್ಪ ಪಕ್ಷಕ್ಕಾಗಿ ಕೆಲಸ ಮಾಡಿದ್ದೀರಿ. ಪಕ್ಷ ಸಂಘಟನೆ ನಿಮ್ಮ ಜೊತೆ ಯಾವಾಗಲೂ ಇರುತ್ತದೆ ಎಂದು ಮೋದಿ ತಿಳಿಸಿದ್ದಾರೆ, ಇದಕ್ಕೆ ಪ್ರತಿಕ್ರಿಯಿಸಿದ ಈಶ್ವರಪ್ಪ, ನೀವು ಪೋನ್ ಮಾಡಿದ್ದು ಖುಷಿ ಆಯ್ತು. ಶಿವಮೊಗ್ಗದಲ್ಲಿ ನಾವು ಗೆಲ್ಲುತ್ತೇವೆ. ನನ್ನಂತಹ ಸಾಮಾನ್ಯ ಕಾರ್ಯಕರ್ತನಿಗೆ ನೀವು ಕರೆ ಮಾಡಿದ್ದು ಬಹಳ ಖುಷಿ ಆಗಿದೆ ಎಂದರು. ಚುನಾವಣಾ ರಾಜಕೀಯಕ್ಕೆ ಈಶ್ವರಪ್ಪ,ಹಾಲಾಡಿ ಶ್ರೀನಿವಾಸ ಶೆಟ್ಟಿ, ಎಸ್ ಎ ರವೀಂದ್ರ ನಾಥ್ ನಿವೃತ್ತಿ ಪ್ರಕಟ
ಈಶ್ವರಪ್ಪ ಅವರ ಪಕ್ಷ ನಿಷ್ಠೆ
ಈಶ್ವರಪ್ಪ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ತೆಗೆದುಕೊಳ್ಳುವಂತೆ ಪಕ್ಷ ಸೂಚಿಸುತ್ತಿದ್ದಂತೆ ಯಾವುದೇ ಮರು ಮಾತಾಡದೇ ಪಕ್ಷದ ಆದೇಶವನ್ನು ಪಾಲನೆ ಮಾಡಿದರು. ರಾಜಕೀಯ ನಿವೃತ್ತಿ ಘೋಷಣೆ ಮಾಡಿದರು. ಇನ್ನು ಈ ಬಾರಿ ಶಿವಮೊಗ್ಗ ನಗರ ಕ್ಷೇತ್ರದಿಂದ ತಮ್ಮ ಪುತ್ರ ಕಾಂತೇಶ್‍ಗೆ ಟಿಕೆಟ್ ಬಯಸಿದ್ದರು. ಆದರೆ ಪುತ್ರನಿಗೆ ಟಿಕೆಟ್ ಸಿಗಲಿಲ್ಲ. ಹೀಗಾಗಿ ಈಶ್ವರಪ್ಪ ಅಸಮಾಧಾನಗೊಳ್ಳಬಹುದು ಎಂಬ ಭಾವನೆ ಎಲ್ಲರಲ್ಲಿತ್ತು. ಆದರೆ ಈಶ್ವರಪ್ಪ ಇದು ಯಾವುದಕ್ಕು ತಲೆ ಕೆಡಿಸಿಕೊಳ್ಳದೇ ಪಕ್ಷ ನಿಷ್ಠೆ ಮೆರೆದರು. ಈಶ್ವರಪ್ಪ ಅವರ ಪಕ್ಷ ನಿಷ್ಠೆ ಮೆಚ್ಚಿ ಸ್ವತಃ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ದೂರವಾಣಿ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ ಎನ್ನಲಾಗಿದೆ.
- ನವೆಂಬರ್ 11ರಿಂದ ಉಪ ಚುನಾವಣಾ ಕ್ಷೇತ್ರಗಳಲ್ಲಿ ಮದ್ಯ ಮಾರಾಟ ನಿಷೇಧ
- ಮಂಡ್ಯ : ಹಿಂದೂ ಸ್ಮಶಾನವನ್ನು ವಕ್ಫ್ ಆಸ್ತಿಯೆಂದು ಘೋಷಿಸಿದ ಪ್ರಕರಣ
- MUDA ಹಗರಣ: ನಾಳೆ ಬೆಳಿಗ್ಗೆ 10 ಗಂಟೆಗೆ ಲೋಕಾಯುಕ್ತ ವಿಚಾರಣೆಗೆ ಹಾಜರಾಗಲು ಸಿಎಂ ಸಿದ್ದರಾಮಯ್ಯ ನಿರ್ಧಾರ
- HDK – ನಿಖಿಲ್ ವಿರುದ್ಧ ಎಡಿಜಿಪಿ ಚಂದ್ರಶೇಖರ್ ದೂರು ದಾಖಲು
- ಚನ್ನಪಟ್ಟಣ ಉಪಚುನಾವಣೆ: ನಿಖಿಲ್ ಕುಮಾರಸ್ವಾಮಿ ಪರ ಪತ್ನಿ ರೇವತಿ ಪ್ರಚಾರದಲ್ಲಿ ಸಕ್ರಿಯ
More Stories
ಚನ್ನಪಟ್ಟಣ ಉಪಚುನಾವಣೆ: ನಿಖಿಲ್ ಕುಮಾರಸ್ವಾಮಿ ಪರ ಪತ್ನಿ ರೇವತಿ ಪ್ರಚಾರದಲ್ಲಿ ಸಕ್ರಿಯ
ಜೆಡಿಎಸ್ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್: ಜಿ ಟಿ ದೇವೇಗೌಡನಿಗೆ ಕೊಕ್
ಮುಖ್ಯಮಂತ್ರಿಗಳ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಜೆಡಿಎಸ್ ದೂರು