ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳ ಒತ್ತಾಯಕ್ಕೆ ಮಣಿದು ಹೈಕಮಾಂಡ್ ತೀರ್ಮಾನದಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಶುಕ್ರವಾರ ರಾತ್ರಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.
ಇಂದು ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಯಾದ ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.
ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿ ನಾನಲ್ಲ ಅಪರಾಧ ಎಸಗಿಲ್ಲ ಎನ್ನುವ ಮಾತನ್ನು ಪುನರುಚ್ಚರಿಸುತ್ತಿರುವ ಈಶ್ವರಪ್ಪ ಹೈಕಮಾಂಡ್ ಸೂಚನೆಯ ಮೇರೆಗೆ ಮಂತ್ರಿ ಸ್ಥಾನದಿಂದ ಕೆಳಗಿಳಿದಿದ್ದಾರೆ.
ಮಂತ್ರಿ ಸ್ಥಾನದಿಂದ ಕೆಳಗಿಳಿಯುವ ಮುನ್ನ, ಈಶ್ವರಪ್ಪ ಸಚಿವರಾಗಿ ಶಿವಮೊಗ್ಗದ ಶುಭಶ್ರೀ ಸಮುದಾಯ ಭವನವನ್ನು ಉದ್ಘಾಟಿಸಿದರು.
ಈ ವೇಳೆ ಈಶ್ವರಪ್ಪ ಬೆಂಬಲಿಗರು, ಯಾವುದೇ ಕಾರಣಕ್ಕೂ ನೀವು ರಾಜೀನಾಮೆ ಕೊಡಬಾರದು ಎಂದು ಒತ್ತಾಯಿಸಿದರು. ಕೆಲವರು ಕಣ್ಣೀರು ಇಟ್ಟರು.
ಬಳಿಕ ಶಿವಮೊಗ್ಗದಿಂದ ಬೆಂಬಲಿಗರೊಂದಿಗೆ ಬೆಂಗಳೂರಿಗೆ ಹೊರಟ ಈಶ್ವರಪ್ಪ ಸಂಚರಿಸಿದ ಮಾರ್ಗ ಮಧ್ಯೆ ಅಪಾರ ಪ್ರಮಾಣದಲ್ಲಿ ಬೆಂಬಲಿಗರು ಸೇರಿದ್ದರು. ಶಿವಮೊಗ್ಗದಿಂದ ಕಡೂರು – ಅರಸೀಕೆರೆ – ತುಮಕೂರು ಮಾರ್ಗವಾಗಿ ಬೆಂಗಳೂರಿಗೆ ಆಗಮಿಸಿದ ಈಶ್ವರಪ್ಪ ಜೊತೆ ರಾಜೀನಾಮೆ ಪಡೀಬೇಡಿ ಎಂದು ಸಿಎಂಗೆ ಒತ್ತಾಯ ಮಾಡಲು ಶಿವಮೊಗ್ಗದಿಂದ ನೂರಾರು ಕಾರುಗಳಲ್ಲಿ ಬೆಂಬಲಿಗರು ಆಗಮಿಸಿದ್ದರು.
ಬಳಿಕ ಸಿಎಂ ಭೇಟಿಯಾಗಿ ರಾಜೀನಾಮೆ ಸಲ್ಲಿಸಿ ಸರ್ಕಾರ ನೀಡಿದ ಕಾರನ್ನು ಬಿಟ್ಟು ಶಿವಮೊಗ್ಗಕ್ಕೆ ಹೊರಟರು.
- ಜಲಗಾರ ಮತ್ತು ಕಾಲ ಜ್ಞಾನಿ ಕನಕ ನಾಟಕಗಳಲ್ಲಿ ದೈವ-ದೇಗುಲ ಸಂಕಥನ
- ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
- ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
More Stories
ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು