December 19, 2024

Newsnap Kannada

The World at your finger tips!

eshwarappa

ಈಶ್ವರಪ್ಪ ಸ್ವಪ್ರೇರಣೆಯಿಂದ ಇಂದು ಸಂಜೆ ರಾಜೀನಾಮೆ ನೀಡಲಿದ್ದಾರೆ – ಸಿಎಂ ಬೊಮ್ಮಾಯಿ

Spread the love

ಸಚಿವ ಕೆ.ಎಸ್. ಈಶ್ವರಪ್ಪ ಇಂದು ಸಂಜೆ ರಾಜೀನಾಮೆ ನೀಡಲಿದ್ದಾರೆ ಅವರು ಸ್ವಯಂ ಪ್ರೇರಣೆಯಿಂದ ಈ ನಿರ್ಧಾರಕ್ಕೆ ಬಂದಿರುವುದಾಗಿ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಯಲ್ಲಿ ಹೇಳಿದರು

ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ ಅವರು, ಈಗಾಗಲೇ ಸಚಿವ ಈಶ್ವರಪ್ಪ ರಾಜೀನಾಮೆ ನೀಡುವ ತೀರ್ಮಾನ ಮಾಡಿದ್ದಾರೆ. ಈ ಬಗ್ಗೆ ನಿನ್ನೆ ರಾತ್ರಿ ಅವರ ಜೊತೆ ಮಾತನಾಡಿದ್ದೇನೆ. ಸ್ವಯಂ ಪ್ರೇರಣೆಯಿಂದ ರಾಜೀನಾಮೆ ನಿರ್ಧಾರಕ್ಕೆ ಬಂದಿದ್ದಾಗಿ ತಿಳಿಸಿದ್ದಾರೆ.

ಜೊತೆಗೆ ಪ್ರಕರಣವನ್ನು ಆದಷ್ಟು ಬೇಗ ತನಿಖೆ ಮಾಡಿಸಿ ಎಂದು ಮನವಿ ಮಾಡಿದ್ದಾರೆ. ಆದಷ್ಟು ಬೇಗ ಆರೋಪ ಮುಕ್ತನಾಗುವ ವಿಶ್ವಾಸ ಅವರಿಗಿದೆ ಎಂದು ತಿಳಿಸಿದರು.

ಗುತ್ತಿಗೆದಾರ ಸಂತೋಷ್‌ ಆತ್ಮಹತ್ಯೆ ಪ್ರಕರಣವನ್ನು ಎಲ್ಲಾ ಆಯಾಮದಲ್ಲೂ ತನಿಖೆ ನಡೆಸುತ್ತೇವೆ. ಪೊಲೀಸರು ತಮ್ಮ ಕೆಲಸವನ್ನು ಮಾಡಲು ಬಿಡಬೇಕು. ಇಡೀ ಬೆಳವಣಿಗೆ ತನಿಖೆ ಆದ ಮೇಲೆ ಈಶ್ವರಪ್ಪ ಆರೋಪ ಮುಕ್ತರಾಗುತ್ತಾರೆ ಎನ್ನುವ ವಿಶ್ವಾಸವಿದೆ. ಈ ಪ್ರಕರಣದಲ್ಲಿ ಸರ್ಕಾರಕ್ಕೆ ಹಿನ್ನಡೆ, ಮುನ್ನಡೆ ಅನ್ನೊ ಮಾತೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ಐಎಎಸ್ ‌ ಅಧಿಕಾರಿಯ ಆತ್ಮಹತ್ಯೆ ಪ್ರಕರಣದಲ್ಲಿ ಜಾರ್ಜ್‌ ಮೇಲೆ ಆರೋಪ ಕೇಳಿ ಬಂದ ಸಂದರ್ಭವನ್ನು ಪ್ರಸ್ತಾಪಿಸಿ ಜಾರ್ಜ್ ಅವರ ರಾಜೀನಾಮೆ ಪಡೆದಿದ್ದರು, ಬಂಧಿಸಿರಲಿಲ್ಲ. ರಾಜ್ಯ ಪೊಲೀಸರು, ಸಿಬಿಐ ಅವರನ್ನು ಬಂಧನ ಮಾಡಿತ್ತಾ ಎಂದು ಪ್ರಶ್ನಿಸಿದರು ವಿರೋಧ ಪಕ್ಷದವರು ತನಿಖಾಧಿಕಾರಿ, ಜಡ್ಜ್ ಆಗುವ ಅವಶ್ಯಕತೆ ಇಲ್ಲ. ತನಿಖೆಯಿಂದ ಸತ್ಯ ಹೊರ ಬರುತ್ತೆ ಎಂದರು.

Copyright © All rights reserved Newsnap | Newsever by AF themes.
error: Content is protected !!