ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಿದ್ಯುತ್ ಚಾಲಿತ ಬಸ್ ಗಳ ಸಂಚಾರ ಇಂದಿನಿಂದ ಆರಂಭಗೊಳ್ಳಲಿದೆ.
ಇಂದಿನಿಂದ ಪ್ರಾಯೋಗಿಕವಾಗಿ ಬೆಂಗಳೂರು ಟು ರಾಮನಗರ ನಡುವೆ ಇಂದು ಪ್ರಾಯೋಗಿಕ ಸಂಚಾರ ನಡೆಸಿತ್ತು.ಇದನ್ನು ಓದಿ –ವಿಕಲಚೇತನ ಮಕ್ಕಳಿಗೆ ವೈದ್ಯಕೀಯ ಮೌಲ್ಯಾಂಕನ ಶಿಬಿರ
ಈ ಬಳಿಕ ಸೋಮವಾರದಿಂದ ಬೆಂಗಳೂರು ಟು ಮೈಸೂರಿಗೆ ಇವಿ ಪ್ಲಸ್ ಎಲೆಕ್ಟ್ರಿಕ್ ಬಸ್ ಸಂಚಾರ ಆರಂಭವಾಗಲಿದೆ.
ಈ ಕುರಿತಂತೆ ಕೆ ಎಸ್ ಆರ್ ಟಿ ಸಿಯಿಂದ ಮಾಹಿತಿ ನೀಡಲಾಗಿದ್ದು, ಇಂದು ಇವಿ ಪ್ಲಸ್ ವಿದ್ಯುತ್ ಚಾಲಿತ ಬಸ್ ಸಂಚಾರವನ್ನು ಪ್ರಾಯೋಗಿಕವಾಗಿ ಬೆಂಗಳೂರಿನಿಂದ ರಾಮನಗರದವರೆಗೆ ನಡೆಸಲಾಯಿತು.
ಈ ಸಂಚಾರ ಯಶಸ್ವಿಯಾದ ಕಾರಣ, ಸೋಮವಾರದಿಂದ ಬೆಂಗಳೂರಿನಿಂದ ಮೈಸೂರಿಗೆ ಇವಿ ಪ್ಲಸ್ ಎಲೆಕ್ಟ್ರಿಕ್ ಬಸ್ ಸಂಚಾರ ಆರಂಭವಾಗಲಿದೆ ಎಂದಿದೆ.
ವಿದ್ಯುತ್ ಚಾಲಿತ ಬಸ್ಸುಗಳನ್ನು ಕೇಂದ್ರ ಸರ್ಕಾರದ ಮೇಕ್ ಇನ್ ಇಂಡಿಯಾ ಫೇಮ್ -2 ಯೋಜನೆಯ ಅಡಿಯಲ್ಲಿ 50 ಬಸ್ ಗಳನ್ನು ಖರೀದಿಸಲಾಗಿತ್ತು. ಇಂದು ಬೆಂಗಳೂರು – ರಾಮನಗರ ಬಸ್ ಸಂಚಾರದ ಯಶಸ್ವಿಯಾಗಿತ್ತು.
ಬೆಂಗಳೂರು ಟು ಮೈಸೂರು ಬಳಿಕ, ಮಡಿಕೇರಿ, ದಾವಣಗೆರೆ, ಶಿವಮೊಗ್ಗ, ವಿರಾಜಪೇಟೆ ಸೇರಿದಂತೆ ರಾಜ್ಯದ ಇತರೆ ಜಿಲ್ಲೆಗಳಿಗೂ ಸಂಚಾರ ಕಾರ್ಯಾಚರಣೆಯ ಯೋಚನೆ ಇದೆ ಎಂದು ಹೇಳಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು