30 ವರ್ಷ ದಾಟಿದ ಬ್ರಹ್ಮಚಾರಿಗಳು ತಮಗೆ ಮದುವೆಯಾಗಲು ಹುಡುಗಿ ಸಿಕ್ಕಿಲ್ಲ. ಒಂದು ಹುಡುಗಿ ಕರುಣಿಸಪ್ಪ ಎಂದು ಮಲೆ ಮಹದೇಶ್ವರ ಬೆಟ್ಟಕ್ಕೆ ಫೆ.23ರಂದು ಮಂಡ್ಯ ಜಿಲ್ಲೆಯ ಕೆ.ಎಂ ದೊಡ್ಡಿಯಿಂದ `ಬ್ರಹ್ಮಚಾರಿಗಳ ನಡೆ ಮಹದೇಶ್ವರ ಬೆಟ್ಟದ ಕಡೆ’ ಹೆಸರಿನಲ್ಲಿ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ.
30 ವರ್ಷ ದಾಟಿದ 200ಕ್ಕೂ ಹೆಚ್ಚು ಮಂದಿ ಬ್ರಹ್ಮಚಾರಿಗಳು ಶ್ರೀಘ್ರ ವಧು ಸಿಗಲೆಂದು ಪ್ರಾರ್ಥನೆ ಮಾಡುವ ಸಲುವಾಗಿ ಮಂಡ್ಯ ಜಿಲ್ಲೆಯ ಕೆ.ಎಂ ದೊಡ್ಡಿಯಿಂದ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹೊರಟಿದ್ದಾರೆ.
ಈ ಪಾದಯಾತ್ರೆಯಲ್ಲಿ ಕೇವಲ ಮಂಡ್ಯ ಜಿಲ್ಲೆಯವರಲ್ಲದೇ ಮೈಸೂರು, ಬೆಂಗಳೂರು, ರಾಮನಗರ, ಚಿಕ್ಕಬಳ್ಳಾಪುರ, ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಬ್ರಹ್ಮಚಾರಿಗಳು ಭಾಗಿಯಾಗಲಿದ್ದಾರೆ.
ನೋಂದಣಿ ಮಾಡಿಕೊಂಡವರಿಗೆ ಮಾತ್ರ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಕಲ್ಪಿಸಲಾಗಿದೆ.