Editorial

ವೇಗದ ಆಧುನಿಕ ಬದುಕಿನಲ್ಲಿ ಎಲ್ಲವೂ ವ್ಯಾಪರೀಕರಣ

ಒಳ್ಳೆಯ ಕೆಲಸದಲ್ಲಿ ಕೆಟ್ಟದ್ದನ್ನು,
ಕೆಟ್ಟ ಕೆಲಸಗಳಲ್ಲಿ ಒಳ್ಳೆಯದನ್ನು ಹುಡುಕುವ ಗುಣ ಜನರಿಂದ ರಾಜಕಾರಣಿಗಳಿಗೆ, ರಾಜಕಾರಣಿಗಳಿಂದ ಮಾಧ್ಯಮಗಳಿಗೆ ವರ್ಗಾಯಿಸಲ್ಪಟ್ಟಿದೆ.

ಪ್ರೀತಿಯಲ್ಲಿ ದ್ವೇಷವನ್ನು,
ದ್ವೇಷದಲ್ಲಿ ಪ್ರೀತಿಯನ್ನು ಹುಡುಕುವ ಮನೋಭಾವ ಧಾರವಾಹಿ ಸಿನಿಮಾ ಕಥೆ ಕಾದಂಬರಿಗಳಿಂದ ಜನರಿಗೆ ವರ್ಗಾಯಿಸಲ್ಪಟ್ಟಿದೆ.

ನಾಜೂಕಿನ ವಂಚನೆಯನ್ನು,
ಕಾನೂನಿನ ನೆರಳಲ್ಲಿ ಅಪರಾಧವನ್ನು, ಅಮಾಯಕರಿಗೆ ಹಿಂಸೆ ಕೊಡುವ ಉಪಾಯಗಳನ್ನು ನ್ಯಾಯಾಲಯಗಳು ಜನರಿಗೆ ವರ್ಗಾಯಿಸಿವೆ.

ಕಲೆಗಳಿಂದ ಜನಪ್ರಿಯತೆಯನ್ನು,
ಜನಪ್ರಿಯತೆಯಿಂದ ಸನ್ಮಾನಗಳನ್ನು,
ಸನ್ಮಾನಗಳಿಂದ ಪ್ರಶಸ್ತಿಗಳನ್ನು,
ಪ್ರಶಸ್ತಿಗಳಿಂದ ಅಧಿಕಾರವನ್ನು,
ಅಧಿಕಾರದಿಂದ ಹಣವನ್ನು ಪಡೆಯುವ ಮಾರ್ಗಗಳನ್ನು ಅಕ್ಷರ ಜ್ಞಾನ ಜನರಿಗೆ ವರ್ಗಾಯಿಸಿದೆ.

ತಪ್ಪುಗಳನ್ನು ಸರಿ ಎಂದು,
ಸರಿಯನ್ನು ತಪ್ಪೆಂದು,
ನಿಜವನ್ನು ಸುಳ್ಳೆಂದು,
ಸುಳ್ಳನ್ನು ನಿಜವೆಂದು,
ವಾಸ್ತವವನ್ನು ಭ್ರಮೆ ಎಂದು
ಭ್ರಮೆಯನ್ನು ವಾಸ್ತವ ಎಂದು ನಿರೂಪಿಸುವ ಕಲೆಗಾರಿಕೆ ಸಮೂಹ ಸಂಪರ್ಕ ಮಾಧ್ಯಮಗಳಿಂದ ಜನರಿಗೆ ವರ್ಗಾಯಿಸಲ್ಪಟ್ಟಿದೆ.

ಕಪಟ ಭಕ್ತಿಯಿಂದ, ಆಡಂಬರ ಪ್ರದರ್ಶನದ ಪೂಜೆಗಳಿಂದ ದೇವರನ್ನೇ ವಂಚಿಸುವ, ದೇವರಿಗೆ ಲಂಚ ಕೊಡುವ ಮನೋಭಾವ ಮಂದಿರ ಮಸೀದಿ ಚರ್ಚುಗಳ ಮುಖ್ಯಸ್ಥರಿಂದ ಜನರಿಗೆ ವರ್ಗಾಯಿಸಲ್ಪಟ್ಟಿದೆ.

ಪಾಶ್ಚಾತ್ಯ ಸಂಸ್ಕೃತಿಗಳ ನಾಗರಿಕ ಪ್ರಜ್ಞೆಯನ್ನು ಮರೆಮಾಚಿ ಅವರ ಊಟ ಬಟ್ಟೆ ಕುಡಿತ ಜೂಜು ಅನೈತಿಕ ಸಂಬಂಧಗಳು ದುಂದು ವೆಚ್ಚ ಮುಂತಾದ ಬಾಹ್ಯ ನಡವಳಿಕೆಗಳು ಮಾತ್ರ ಮಾಧ್ಯಮಗಳ ಮುಖಾಂತರ ಜನರಿಗೆ ವರ್ಗಾಯಿಸಲ್ಪಟ್ಟಿದೆ.

ಹೀಗೆ ವರ್ಗಾಯಿಸಲ್ಪಟ್ಟ ಮನಸ್ಥಿತಿ ಇಡೀ ವ್ಯವಸ್ಥೆಯ ಮೂಲದ್ರವ್ಯವನ್ನೇ ನುಂಗಿ ಮೌಲ್ಯಗಳ ಅಧಃಪತನ ಹೊಂದಿ ಕೇವಲ ಮುಖವಾಡಗಳ ವ್ಯಾವಹಾರಿಕ ಜೀವನವೇ ನಮ್ಮ ಸಮಾಜವಾಗಿದೆ.
ಇದನ್ನು ಬದಲಿಸುವುದೇ ನಮ್ಮೆಲ್ಲರ ಮೊದಲ ಆಧ್ಯತೆಯಾಗಿರಲಿ.

ಏಕೆಂದರೆ ಈಗ ನಾವು ನಮ್ಮ ಜವಾಬ್ದಾರಿ ನಿರ್ವಹಿಸದೆ ಮೌನವಾಗಿ ಎಲ್ಲವನ್ನೂ ಸಹಿಸಿಕೊಂಡರೆ ಭವಿಷ್ಯದಲ್ಲಿ ನಮ್ಮ ಮಕ್ಕಳ ಬದುಕು ತುಂಬಾ ಕಷ್ಟದ ಹಾದಿಯಾಗುತ್ತದೆ. ಹಾಲು ಕುಡಿಯುವವರೇ ಬದುಕುವುದು ಕಷ್ಟವಾಗಿರುವಾಗ ವಿಷ ಕುಡಿಯುವವರು ಬದುಕಲು ಸಾಧ್ಯವೇ ?

ವೇಗದ ಆಧುನಿಕ ಬದುಕಿನಲ್ಲಿ ಎಲ್ಲವೂ ವ್ಯಾಪರೀಕರಣ ಆಗಿರುವಾಗ ನಾವು ನಮ್ಮ ಜವಾಬ್ದಾರಿ ನಿರ್ವಹಿಸಲೇ ಬೇಕು. ಆ ಬಗ್ಗೆ ದಯವಿಟ್ಟು ಗಂಭೀರವಾಗಿ ಯೋಚಿಸಿ ಎಂದು ಮನವಿ ಮಾಡಿಕೊಳ್ಳುತ್ತಾ……,.

  • ವಿವೇಕಾನಂದ ಹೆಚ್.ಕೆ.
Team Newsnap
Leave a Comment
Share
Published by
Team Newsnap

Recent Posts

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಿದ್ಧಾರ್ಥ್ ಮತ್ತು ಅದಿತಿ ರಾವ್ ಹೈದರಿ

ಇಂದು 400 ವರ್ಷಗಳ ಹಿಂದಿನ ಪುರಾತನ ದೇವಸ್ಥಾನದಲ್ಲಿ ತಮಿಳಿನ ಸ್ಟಾರ್ ನಟ ಸಿದ್ಧಾರ್ಥ್ ಮತ್ತು ಅದಿತಿ ರಾವ್ ಹೈದರಿ ದಾಂಪತ್ಯ… Read More

September 16, 2024

ರಾಜ್ಯದಲ್ಲಿ 2.5 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ : ಪ್ರಿಯಾಂಕ್‌ ಖರ್ಗೆ

ಬೆಂಗಳೂರು : ಪ್ರಿಯಾಂಕ್ ಖರ್ಗೆ ಅವರು ರಾಜ್ಯದಲ್ಲಿ ಒಟ್ಟು 2.5 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇದ್ದು ಹಂತಹಂತವಾಗಿ ತುಂಬಲಾಗುವುದು… Read More

September 16, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 16 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,800 ರೂಪಾಯಿ ದಾಖಲಾಗಿದೆ. 24… Read More

September 16, 2024

ಇಂದು ಬಿಜೆಪಿ ಸತ್ಯಶೋಧನಾ ಸಮಿತಿಯಿಂದ ನಾಗಮಂಗಲಕ್ಕೆ ಭೇಟಿ

ಮಂಡ್ಯ: ಇಂದು ಬಿಜೆಪಿ ಸತ್ಯಶೋಧನಾ ಸಮಿತಿ ನಾಗಮಂಗಲದಲ್ಲಿ ಗಲಭೆ ನಡೆದ ಸ್ಥಳಕ್ಕೆ ಭೇಟಿ ನೀಡಲಿದೆ. ಬಿಜೆಪಿ ನಿಯೋಗ , ಇತ್ತೀಚೆಗಷ್ಟೇ… Read More

September 16, 2024

ಮತ್ತೊಮ್ಮೆ ಡೊನಾಲ್ಡ್​ ಟ್ರಂಪ್​ ಮೇಲೆ ಗುಂಡಿನ ದಾಳಿ

ವಾಷಿಂಗ್ಟನ್: ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಊಟ ಮಾಡಿ ಹೆಚ್ಚಿನ ಸಮಯವನ್ನು ಕಳೆಯುವ ಸ್ಥಳದಲ್ಲಿ ಗುಂಡಿನ ದಾಳಿ ನಡೆದಿದೆ.… Read More

September 16, 2024

ಅಭಿವೃದ್ಧಿ ಹರಿಕಾರ ,’ಕರ್ಮಯೋಗಿ’ ಭಾರತ ರತ್ನ ಮೋಕ್ಷಗುಂಡಂ ವಿಶ್ವೇಶ್ವರಯ್ಯ

ನನ್ನ ತೊಂಬತ್ತನೆಯ ವಯಸ್ಸಿನಲ್ಲಿ ಹೆಜ್ಜೆ ಇಡುವಲ್ಲಿ ನಾನು ಇನ್ನೂ ತಕ್ಕಷ್ಟು ಆರೋಗ್ಯವಾಗಿದ್ದೇನೆ. ಮೈಕೈ ದೌರ್ಬಲ್ಯ ಬಹಳವೇನೂ ಬರಲಿಲ್ಲ. ಕನ್ನಡಕವಿಲ್ಲದೆ ಓದಬಲ್ಲೆ.… Read More

September 15, 2024