ವಿಧಾನ ಸಭಾ ಚುನಾವಣೆಗೆ ರಣ ತಂತ್ರ ರೂಪಿಸಲು ರಾಜ್ಯದೆಲ್ಲೆಡೆ ರಾಜಕೀಯ ಮುಖಂಡರು ಭರ್ಜರಿ ಸಿದ್ದತೆ ನಡೆಸುತ್ತಿದ್ದಾರೆ. ಈ ಬೆನ್ನಲ್ಲೆ ಮತದಾರರನ್ನು ಸೆಳೆಯುವುದಕ್ಕೆ ಹೊಸ ಹೊಸ ಯೋಜನೆ ಘೋಷಣೆ ಮಾಡಿದ್ದಾರೆ.
ರೈತ ಮಕ್ಕಳಿಗೆ ಹೆಣ್ಣು ಕೊಡುವುದಿಲ್ಲ ಎಂಬ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿತ್ತು, ಈ ಬೆನ್ನಲ್ಲೆ ಇದನ್ನೆ ಬಂಡವಾಳವನ್ನಾಗಿ ಮಾಡಿಕೊಂಡ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ , ಇದೀಗ ಮತದಾರರನ್ನು ಸೆಳೆಯುವುದಕ್ಕೆ ಹೊಸ ಪ್ಲ್ಯಾನ್ ಮಾಡುವ ಮೂಲಕ ಅಮೀಷವೊಡಿದ್ದಾರೆ.
ಹೆಚ್.ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಪಂಚರತ್ನ ರಥಯಾತ್ರೆಯನ್ನ ತುಮಕೂರಿನ ಹಾಲ್ಕುರಿಕೆ ಗ್ರಾಮದಲ್ಲಿ ಬುಧವಾರ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ‘ ರೈತ ಮಕ್ಕಳನ್ನ ಮದುವೆಯಾಗುವ ಹೆಣ್ಣು ಮಕ್ಕಳಿಗೆ 2 ಲಕ್ಷ ಪ್ರೋತ್ಸಾಹ ಧನ ‘ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
More Stories
ಡೆಂಘಿ ಜ್ವರಕ್ಕೆ 7 ವರ್ಷದ ಬಾಲಕ ಬಲಿ: ವೈದ್ಯರ ನಿರ್ಲಕ್ಷ್ಯಕ್ಕೆ ಪೋಷಕರ ಆಕ್ರೋಶ
ಚಿನ್ನದ ಹಗರಣ: 50ಕ್ಕೂ ಅಧಿಕ ಮಂದಿ ವಂಚನೆಗೆ ಬಲಿ!
ಪ್ರಥಮ ಪಿಯುಸಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವು