ಮಾಜಿ ಸಿಎಂ ಯಡಿಯೂರಪ್ಪನವರ ಅತ್ತಿಗೆ ಶಾರದಮ್ಮ ಮಹದೇವಪ್ಪ (90) ಇಂದು ಕೆ ಆರ್ ಪೇಟೆ ತಾಲೂಕಿನ ಬೂಕನಕೆರೆಯ ತಮ್ಮ ನಿವಾಸದಲ್ಲಿ ನಿಧನರಾದರು.
ವಯೋಸಹಜ ಖಾಯಿಲೆ ಗಳಿಂದ ಬಳಲಿದ್ದರು. ಮೃತರು ಇಬ್ಬರು ಪುತ್ರಿಯರು, ಓರ್ವ ಪುತ್ರ, ಮೈದುನ ಯಡಿಯೂರಪ್ಪ ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆಯು ಅ.4ರಂದು ಸೋಮವಾರ ಮಧ್ಯಾಹ್ನ ನಡೆಯಲಿದೆ.
ಅಂತ್ಯಕ್ರಿಯೆಯಲ್ಲಿ ಮಾಜಿ ಯಡಿಯೂರಪ್ಪ, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸಿ.ನಾರಾಯಣಗೌಡ, ಸಂಸದ ಬಿ.ವೈ.ರಾಘವೇಂದ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕೆಎಂಎಫ್ ನಿರ್ದೇಶಕ ಎಸ್.ಸಿ.ಅಶೋಕ್ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ.
ಮೃತರ ನಿಧನಕ್ಕೆ ತಾಲ್ಲೂಕಿನ ವಿವಿಧ ಗಣ್ಯರು ಸಂತಾಪ ಸೂಚಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸಪ್ತಪದಿ ತುಳಿದ ಮೂರೇ ದಿನದಲ್ಲಿ ಹೃದಯಾಘಾತದಿಂದ ನವವಿವಾಹಿತ ಅಕಾಲಿಕ ಸಾವು
ಏ.7 ಕ್ಕೆ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯದಲ್ಲಿ ಭೀಕರ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ದಾರುಣ ಸಾವು