January 30, 2026

Newsnap Kannada

The World at your finger tips!

sashi kanth

ಮಾಜಿ ಐಎಎಸ್‌ ಅಧಿಕಾರಿ ಸಸಿಕಾಂತ್‌ ಸೆಂಥಿಲ್‌ ನಾಳೆ ಕಾಂಗ್ರೆಸ್‌ ಸೇರ್ಪಡೆ!

Spread the love

ಕರ್ನಾಟಕ ಕೇಡರ್‌ನ ಮಾಜಿ ಐಎಎಸ್‌ ಅಧಿಕಾರಿ ಸಸಿಕಾಂತ್‌ ಸೆಂಥಿಲ್‌ ಕಾಂಗ್ರೆಸ್‌ ಸೇರಲಿದ್ದಾರೆ.

ಎಐಸಿಸಿಯ ತಮಿಳುನಾಡು ಉಸ್ತುವಾರಿ ದಿನೇಶ್‌ ಗುಂಡೂರಾವ್‌ ಸೆಂಥಿಲ್‌ ಅವರನ್ನು ಪಕ್ಷಕ್ಕೆ ಕರೆತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎನ್ನಲಾಗಿದೆ.

2017ರ ಅಕ್ಟೋಬರ್‌ 10ರಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸೆಂಥಿಲ್ 2019ರ ಸೆಪ್ಟೆಂಬರ್‌ ತಿಂಗಳು ರಾಜೀನಾಮೆ ನೀಡಿದ್ದರು.

ಸೋಮವಾರ ದೆಹಲಿಯ ಎಐಸಿಸಿ ಕಚೇರಿಯಲ್ಲಿಯೇ ಸೆಂಥಿಲ್ ಕಾಂಗ್ರೆಸ್ ಸೇರಲಿದ್ದಾರೆ.

error: Content is protected !!