May 21, 2022

Newsnap Kannada

The World at your finger tips!

jayachandra

ಮಾಜಿ ಸಚಿವ ಟಿ.ಬಿ ಜಯಚಂದ್ರ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ : ಪ್ರಾಣಾಪಾಯದಿಂದ ಪಾರು

Spread the love

ಮಾಜಿ ಸಚಿವ ಟಿಬಿ ಜಯಚಂದ್ರ ಪ್ರಯಾಣಿಸುತ್ತಿದ್ದ ಕಾರು ಪಲ್ಟಿದ ಘಟನೆ ತುಮಕೂರು ಬಳಿಯ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ.

ಅಪಘಾತದಲ್ಲಿ ಮಾಜಿ ಸಚಿವ ಟಿಬಿ ಜಯಚಂದ್ರ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಕಾರು ಉರುಳಿ ಬಿದ್ದಿದೆ.

ರಾತ್ರಿ ಸುಮಾರು 1 ಗಂಟೆಯಲ್ಲಿ ಈ ಘಟನೆ ನಡೆದಿದೆ. ಅಪಘಾತದ ಸಂದರ್ಭದಲ್ಲಿ ಕಾರಿನಲ್ಲಿದ್ದ ಗನ್ ಮ್ಯಾನ್ ಹಾಗೂ‌‌ ಚಾಲಕ ಕೂಡ ಸೇಫ್ ಆಗಿದ್ದಾರೆ.

ಗಾಯಗೊಂಡ ಜಯಚಂದ್ರ ಅವರಿಗೆ ಬೆಂಗಳೂರಿನ ವಿಕ್ರಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

error: Content is protected !!