ಕೋವಿಡ್ ಕುರಿತಾಗಿ ಇಂದು ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಜೊತೆ ಸಭೆ ನಡೆಸುತ್ತಿದ್ದು, ಸಭೆಯಲ್ಲಿ ಐತಿಹಾಸಿಕ ನಿರ್ಧಾರಗಳನ್ನು ಪ್ರಕಟಿಸುವ ನಿರೀಕ್ಷೆಯಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಎಂ ಗಳ ಜೊತೆ ಪ್ರಧಾನಿ ಮೋದಿ ಸಭೆ ಆರಂಭವಾಗಿದ್ದು, ಎರಡು ಹಂತಗಳಲ್ಲಿ ಸಭೆ ನಡೆಯುತ್ತಿದೆ. ಆರಂಭದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ರಾಜ್ಯಗಳಾದ ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಕೇರಳ, ರಾಜಸ್ಥಾನ ಸೇರಿದಂತೆ 8 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಿದ್ದಿರೆ. ಬಳಿಕ ಎರಡನೆ ಹಂತದ ಸಭೆಯಲ್ಲಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸುತ್ತಿದ್ದು, ಈ ವೇಳೆ ಆಯಾ ರಾಜ್ಯಗಳ ಕೋವಿಡ್ ಸ್ಥಿತಿಗತಿ ಹಾಗೂ ಕೋವಿಡ್ ಲಸಿಕೆ ಬಗ್ಗೆ ಚರ್ಚೆ ನಡೆಸಲಿದ್ದಾರೆ.
ಸಭೆಗೂ ಮುನ್ನ ಮಾತನಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ, ಪ್ರಧಾನಿ ಮೋದಿ ನಡೆಸಲಿರುವ ಈ ಸಭೆಯಲ್ಲಿ ಐತಿಹಾಸಿಕ ನಿರ್ಧಾರದ ಘೋಷಣೆಯಾಗುವ ನಿರೀಕ್ಷೆಯಿದೆ. ಕೋವಿಡ್ ಸೋಂಕಿತರಿಗೆ ಸೌಲಭ್ಯ, ಕೊರೊನಾ ಲಸಿಕೆ ಬಗ್ಗೆ ಸಿಹಿಸುದ್ದಿ ಪ್ರಕಟವಾಗುವ ಸಾಧ್ಯತೆಯಿದೆ. ನಾವೆಲ್ಲರೂ ಪ್ರಧಾನಿ ಮೋದಿ ಘೋಷಣೆ ಬಗ್ಗೆ ಕಾಯುತ್ತಿದ್ದೇವೆ ಎಂದು ತಿಳಿಸಿದ್ದಾರೆ.
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
- ಚುನಾವಣೆಗೂ ಮುನ್ನ ಕೇಜ್ರಿವಾಲ್ ಸಂಕಷ್ಟ – ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಇಡಿಗೆ ರಾಜ್ಯಪಾಲರ ಅನುಮತಿ
- ನೆಲಮಂಗಲ ಟೀ ಬೇಗೂರು ಬಳಿ ಭೀಕರ ಸರಣಿ ಅಪಘಾತ: ಒಂದೇ ಕುಟುಂಬದ 6 ಮಂದಿ ಸಾವು
- ಪ್ರತಿ ಗ್ರಾ.ಪಂ ಅಭಿವೃದ್ಧಿಗೆ 8-9 ಕೋಟಿ ರೂ. ಅನುದಾನ: ಸಚಿವ ಮಧು ಬಂಗಾರಪ್ಪ
More Stories
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
ನೆಲಮಂಗಲ ಟೀ ಬೇಗೂರು ಬಳಿ ಭೀಕರ ಸರಣಿ ಅಪಘಾತ: ಒಂದೇ ಕುಟುಂಬದ 6 ಮಂದಿ ಸಾವು