February 23, 2026

Newsnap Kannada

The World at your finger tips!

cd

ಸಿಡಿ ಪ್ರಕರಣದ ಪ್ರಮುಖ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು

Spread the love

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಪ್ರಮುಖ ಆರೋಪಿಗಳಾದ ನರೇಶ್ ಗೌಡ ಹಾಗೂ ಶ್ರವಣ್ ಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ನ್ಯಾಯಾಲಯ ತೀರ್ಪು ನೀಡಿದೆ.

ಆರೋಪಿಗಳಾದ ನರೇಶ್ ಹಾಗೂ ಶ್ರವಣ್ ವಿರುದ್ಧ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಹನಿಟ್ರ್ಯಾಪ್, ಬ್ಲ್ಯಾಕ್ ಮೇಲ್ ಆರೋಪದಡಿ ಪ್ರಕರಣ ದಾಖಲಿಸಿದ್ದರು.

ಇಬ್ಬರೂ ಸಹ ಬಂಧನ ಭೀತಿಯಲ್ಲಿದ್ದ ಕಾರಣಕ್ಕಾಗಿ ತಲೆಮರೆಸಿಕೊಂಡಿದ್ದ ಇಬ್ಬರಿಗೂ ನಿರೀಕ್ಷಣ ಜಾಮಿನಿಗಾಗಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಮನ್ನಿಸಿದ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.

error: Content is protected !!