ಕೊರೋನಾ ಸಂಕಷ್ಟದ ಈ ಸಂದರ್ಭದಲ್ಲಿಯೇ ಬಿಬಿಎಂಪಿಯ ಶಾಲಾ – ಕಾಲೇಜುಗಳಲ್ಲಿ 2020-21ನೇ ಶೈಕ್ಷಣಿಕ ವರ್ಷಕ್ಕೆ ಸುಮಾರು 13,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ದಾಖಲಾತಿ ಪಡೆದಿದ್ದಾರೆ.
ಕೋರೋನಾ ಹಿನ್ನೆಲೆಯಲ್ಲಿ ಮಾರ್ಚ್‌ನಲ್ಲಿ ಸ್ಥಗಿತಗೊಳಿಸಲಾಗಿದ್ದ ಶಾಲಾ ಕಾಲೇಜುಗಳು ಇನ್ನೂ ಆರಂಭವಾಗಿಲ್ಲ. ಆದರೂ ಈ ಬಾರಿಯ ಶೈಕ್ಷಣಿಕ ವರ್ಷದಲ್ಲಿ ದಾಖಲಾತಿ ಸಂಖ್ಯೆ ಕಡಿಮೆಯಾಗದೆ ಹೆಚ್ಚಾಗಿದೆ. ಬಿಬಿಎಂಪಿಯ 16 ಪ್ರಾಥಮಿಕ, 33 ಪ್ರೌಢ ಶಾಲೆ, 15 ಪದವಿ ಪೂರ್ವ ಕಾಲೇಜು, ನಾಲ್ಕು ಪದವಿ ಕಾಲೇಜು ಹಾಗೂ ಎರಡು ಸ್ನಾತಕೋತ್ತರ ಪದವಿ ಕಾಲೇಜುಗಳಿಗೆ ಈಗಾಗಲೇ ದಾಖಲಾತಿ ಆರಂಭಿಸಲಾಗಿದ್ದು, ಈವರೆಗೆ 12,579 ವಿದ್ಯಾರ್ಥಿಗಳು ಪ್ರವೇಶಾತಿ ಪಡೆದುಕೊಂಡಿದ್ದಾರೆ.
ದಾಖಲಾತಿಯ ಸಂಖ್ಯೆಯಲ್ಲಿನ ಹೆಚ್ಚಳದ ಸಂಬಂಧ ಮಾತನಾಡಿದ ಬಿಬಿಎಂಪಿ ಶಿಕ್ಷಣ ವಿಭಾಗದ ಸಹಾಯಕ ಆಯುಕ್ತ ನಾಗೇಂದ್ರ ನಾಯ್ಕ್ ಅವರು ‘ಬಿಬಿಎಂಪಿಯ ಶಾಲಾ-ಕಾಲೇಜುಗಳಿಗೆ ಸಾಮನ್ಯವಾಗಿ ವಲಸೆ ಕಾರ್ಮಿಕರು, ಕೂಲಿ ಕಾರ್ಮಿಕರ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುತ್ತಾರೆ. ಲಾಕ್‌ಡೌನ್ ಹಾಗೂ ಸೋಂಕಿನ ಭೀತಿಯಿಂದ ಅನೇಕರು ಬೆಂಗಳೂರು ನಗರ ಬಿಟ್ಟು ತಮ್ಮ ಸ್ವಂತ ಊರುಗಳಿಗೆ ಹೋದರೂ ಈ ವರ್ಷ ಹೆಚ್ಚಿನ ವಿದ್ಯಾರ್ಥಿಗಳು ದಾಖಲಾತಿ ಪಡೆದುಕೊಂಡಿದ್ದಾರೆ. ಕೊರೋನಾ ಸೋಂಕು ಕಡಿಮೆಯಾಗಿ ಶಾಲಾ-ಕಾಲೇಜು ಆರಂಭಗೊಂಡರೆ ಇನ್ನಷ್ಟು ವಿದ್ಯಾರ್ಥಿಗಳು ಪಾಲಿಕೆ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಪಡೆದುಕೊಳ್ಳುವ ನಿರೀಕ್ಷೆ ಇದೆ’ ಎಂದು ಹೇಳಿದರು.
ಇನ್ನೂ ನರ್ಸರಿ ಶಾಲೆಗಳನ್ನು ಆರಂಭ ಮಾಡಿಲ್ಲ. ನರ್ಸರಿಗಳನ್ನೂ ಆರಂಭಿಸಿದರೆ ಸಂಖ್ಯೆ 13,000 ದಾಟುವದರಲ್ಲಿ ಆಶ್ಚರ್ಯವಿಲ್ಲ. ಈಗಾಗಲೇ ಎಲ್ಲ ಶಾಲಾ-ಕಾಲೇಜುಗಳಲ್ಲಿ ಸೀಟುಗಳು ಬಹುತೇಕ ಭರ್ತಿಯಾಗಿದೆ. ದಾಖಲಾತಿಯ ಸಂಖ್ಯೆ ಹೆಚ್ಚುತ್ತಾ ಹೋದರೆ ಹೊಸದಾಗಿ ಶಾಲಾ ಕಾಲೇಜುಗಳನ್ನು ಆರಂಭಿಸಲಾಗುವ ಸೂಚನೆ ಇದೆ.
More Stories
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು