March 13, 2026

Newsnap Kannada

The World at your finger tips!

b c nagesh

Recruitment of 15 thousand graduate primary teachers: Provisional selection list released - Minister Nagesh 15 ಸಾವಿರ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ : ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ - ಸಚಿವ ನಾಗೇಶ್

ರಾಜ್ಯದಲ್ಲಿ ಎರಡು ಹಂತಗಳಲ್ಲಿ ಶಾಲೆಗಳನ್ನು ಆರಂಭಿಸಲು ತಜ್ಞರ ಸಲಹೆ – ಸಚಿವ ನಾಗೇಶ್

Spread the love

ರಾಜ್ಯದಲ್ಲಿ ಎರಡು ಹಂತದಲ್ಲಿ ಶಾಲಾ ಆರಂಭಕ್ಕೆ ತಜ್ಞರು ಸೂಚಿಸಿದ್ದಾರೆ ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದರು.

ಚಿಕ್ಕಮಗಳೂರಿನಲ್ಲಿ‌ ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ನಾಗೇಶ್ , ಮೊದಲು ಹಂತದಲ್ಲಿ 6 ರಿಂದ 8ನೇ ತರಗತಿ ಆರಂಭಿಸಲಾಗುತ್ತದೆ. ಆನಂತರ 1 ರಿಂದ 5ನೇ ತರಗತಿ ಶಾಲೆಗಳ ಪ್ರಾರಂಭ ಮಾಡಲಾಗುತ್ತದೆ ಎಂದರು.‌

ಶಿಕ್ಷಣ ತಜ್ಞರು ಶಾಲೆಗಳ ಆರಂಭಕ್ಕೆ ಗ್ರೀನ್ ಸಿಗ್ನಲ್ ನೀಡುವುದನ್ನ ಕಾಯುತ್ತಿದ್ದೇವೆ.‌. ಅವರ ಅನುಮತಿ ನೀಡಿದ ಕೂಡಲೇ ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸಲಾಗುತ್ತದೆ ಎಂದು ಹೇಳಿದರು.

ಶಾಲಾ ತರಗತಿಗಳನ್ನು ಭೌತಿಕವಾಗಿ ಆರಂಭಿಸಲು ಶಿಕ್ಷಣ ಇಲಾಖೆ ಕೂಡ ಸಿದ್ಧತೆಯನ್ನು ಮಾಡುತ್ತಿದೆ. ಆದರೆ ತಜ್ಞರೊಂದಿಗೆ ಸಭೆ ನಡೆಸಿ, ಚರ್ಚಿಸಿದ ನಂತರವೇ ಅಂತಿಮವಾಗಿ ತೀರ್ಮಾನವನ್ನು ಮಾಡಲಾಗುತ್ತದೆ ಎಂದು ಹೇಳಿದರು.

error: Content is protected !!