Categories: Main News

ರಾಜ್ಯದ ಕ್ರೀಡಾಪಟುಗಳ ಆರೋಗ್ಯ ರಕ್ಷಣೆಗೆ ತಜ್ಞರ ಮಾರ್ಗದರ್ಶನ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್

  • ನಮ್ಮ ಕ್ರೀಡಾಪಟುಗಳಿಗೆ ಸರಿಯಾದ ಮಾರ್ಗದರ್ಶನ ಅಗತ್ಯ
  • ಕ್ರೀಡಾ ಇಲಾಖೆ, ರಾಜೀವ್ ಗಾಂಧಿ ವಿವಿ ನಡುವೆ ಒಪ್ಪಂದ

ರಾಜ್ಯದಲ್ಲಿ ಪ್ರತಿಭಾವಂತ ಕ್ರೀಡಾಪಟುಗಳಿದ್ದು, ಇಂತಹವರಿಗೆ ಸರಿಯಾದ ತರಬೇತಿ, ಆರೋಗ್ಯದ ಬಗ್ಗೆ ಮಾರ್ಗದರ್ಶನ ನೀಡಲು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ತಜ್ಞರ ಸಲಹೆ ಪಡೆಯುವ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧೀನದ ರಾಜ್ಯದ 34 ಕ್ರೀಡಾ ವಸತಿನಿಲಯದ ಕ್ರೀಡಾಪಟುಗಳಿಗೆ ವೈದ್ಯಕೀಯ ಸೌಲಭ್ಯ ಒದಗಿಸುವ ಯೋಜನೆಯನ್ನು ಸರ್ಕಾರ ರೂಪಿಸಿದೆ. ವಿಕಾಸಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವ ಡಾ.ಕೆ.ಸುಧಾಕರ್ ಅವರ ಉಪಸ್ಥಿತಿಯಲ್ಲಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಬೆಂಗಳೂರು ಮತ್ತು ಕ್ರೀಡಾ ವಿಜ್ಞಾನ ಕೇಂದ್ರಗಳ ನಡುವೆ ಒಪ್ಪಂದಕ್ಕೆ ಸಹಿ ಹಾಕಲಾಯಿತು.

ನಂತರ ಮಾತನಾಡಿದ ಸಚಿವರು, ಯುವಜನರಿಗೆ ಕ್ರೀಡಾ ಚಟುವಟಿಕೆ ಬಹಳ ಮುಖ್ಯ. ಮಕ್ಕಳಿಗೆ ದೈಹಿಕ ಆರೋಗ್ಯವನ್ನು ಸದೃಢವಾಗಿರಿಸಿಕೊಳ್ಳಲು ಕ್ರೀಡೆ ಅಗತ್ಯ. ಕ್ರೀಡೆಯಲ್ಲಿ ತೊಡಗಿಸಿಕೊಂಡವರು ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯವನ್ನು ಕೂಡ ಕಾಪಾಡಿಕೊಳ್ಳಬೇಕು. ಆರೋಗ್ಯವನ್ನು ಉತ್ತಮವಾಗಿರಿಸಿಕೊಳ್ಳಲು ರಾಜ್ಯದ ತಜ್ಞರು ಮಾರ್ಗದರ್ಶನ ನೀಡಲಿದ್ದಾರೆ. ಯಾವ ರೀತಿಯ ಆಹಾರ ಸೇವಿಸಬೇಕು ಎಂಬುದರಿಂದ ಆರಂಭವಾಗಿ, ಯಾವ ವ್ಯಕ್ತಿಯ ದೇಹಕ್ಕೆ ಯಾವ ರೀತಿ ಚಟುವಟಿಕೆ ಬೇಕು ಎಂಬ ಬಗ್ಗೆ ವಿಶ್ಲೇಷಣೆ ಮಾಡಿ, ಸಲಹೆ ನೀಡಲಾಗುತ್ತದೆ ಎಂದು ತಿಳಿಸಿದರು.

130 ಕೋಟಿ ಜನರಿರುವ ದೇಶದಲ್ಲಿ ಒಲಿಂಪಿಕ್ಸ್ ಮೊದಲಾದ ಕ್ರೀಡಾಸ್ಪರ್ಧೆಗಳಲ್ಲಿ ಎಷ್ಟು ಪದಕ ಪಡೆಯುತ್ತಿದ್ದೇವೆ ಎಂದು ಪ್ರಶ್ನಿಸಿಕೊಳ್ಳಬೇಕಿದೆ. ನಮ್ಮಲ್ಲಿ ಎಲ್ಲ ರೀತಿಯ ಪ್ರತಿಭಾವಂತರಿದ್ದಾರೆ. ಆದರೆ ಇಂತಹವರಿಗೆ ಸರಿಯಾದ ತರಬೇತಿ, ಮಾರ್ಗದರ್ಶನ ನೀಡಬೇಕಿದೆ. ಕ್ರೀಡಾ ಇಲಾಖೆಯವರು ಮಕ್ಕಳಲ್ಲಿ ಹೊಸತನ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಇದಕ್ಕಾಗಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ನೆರವು ಪಡೆಯಲಾಗುತ್ತಿದೆ. 34 ಕ್ರೀಡಾ ವಸತಿ ಶಾಲೆಗಳ ಮಕ್ಕಳು ಇದರ ಸದುಪಯೋಗ ಪಡೆಯಬೇಕು. ಇಂತಹ ಒಳ್ಳೆಯ ಉದ್ದೇಶದಿಂದ ಉತ್ತಮ ಫಲಿತಾಂಶ ದೊರೆಯಲಿದೆ. ನಮ್ಮ ರಾಜ್ಯದ ಮಕ್ಕಳು ವೈಯಕ್ತಿಕವಾಗಿ ಹಾಗೂ ದೇಶಕ್ಕಾಗಿ ಹೆಸರು ತಂದು ಕೀರ್ತಿ ಸಂಪಾದಿಸಲು ಇದು ನೆರವಾಗಲಿದೆ ಎಂದರು.

ಒಪ್ಪಂದ

ರಾಜ್ಯದ 30 ಜಿಲ್ಲೆಗಳ ಕ್ರೀಡಾ ವಸತಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಗ್ರಾಮೀಣ ಭಾಗದ ಕ್ರೀಡಾಪಟುಗಳಿಗೆ ಹೆಚ್ಚಿನ ವೈದ್ಯಕೀಯ ಚಿಕಿತ್ಸೆ, ಆರೋಗ್ಯ ಶಿಕ್ಷಣ, ಆರೋಗ್ಯ ಮಾಹಿತಿ, ದೈಹಿಕ ಆರೋಗ್ಯ ಹಾಗೂ ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲು ಈ ಕಾರ್ಯಕ್ರಮ ಸಹಕಾರಿ.

ಪ್ರತಿ ಜಿಲ್ಲೆಗಳಲ್ಲಿ ಮೆಡಿಕಲ್ ಕಾಲೇಜುಗಳ ವಿವಿಧ ವಿಭಾಗಗಳ ತಜ್ಞರ ಸಹಾಯವನ್ನು ವಸತಿ ಶಾಲೆಗಳು ಪಡೆಯಬಹುದು. ಕ್ರೀಡಾಪಟುಗಳ ಆರೋಗ್ಯ ತಪಾಸಣೆ ಮಾಡಬಹುದು.

Team Newsnap
Leave a Comment
Share
Published by
Team Newsnap

Recent Posts

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024