ಸರ್ಕಾರ ಮತ್ತು ಜಿಲ್ಲಾಡಳಿತ ನಿರ್ಲಕ್ಷ್ಯ ತೋರಿದರೆ ಶಿವಮೊಗ್ಗದ ಜಿಲೆಟಿನ್ ಸ್ಫೋಟ ಮಾದರಿಯಲ್ಲಿ , ಮಂಡ್ಯ ಜಿಲ್ಲೆಯಲ್ಲೂ ಭವಿಷ್ಯದಲ್ಲಿ ಸಂಭವಿಸಬಹುದಾದ ಅನಾಹುತದ ಬಗ್ಗೆ ಎಚ್ಚರಿಕೆ ಸಂಸದೆ ಸುಮಲತಾ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸುಮಲತಾ, ಶಿವಮೊಗ್ಗದಲ್ಲಿ ನಡೆದ ಘಟನೆ ತಿಳಿದು ತೀವ್ರ ನೋವಾಯಿತು. ನಮ್ಮೆಲರಿಗೂ ಇದೊಂದು ಎಚ್ಚರಿಕೆಯ ಗಂಟೆ. ಅಕ್ರಮ ಗಣಿಗಾರಿಕೆಯನ್ನು ಶಾಶ್ವತವಾಗಿ ನಿಲ್ಲಿಸುವ ಸಮಯ ಬಂದಿದೆ ಎಂದು ಹೇಳಿದ್ದಾರೆ.
ಈ ದುರದುಷ್ಟಕರ ಘಟನೆಯ ಹಿಂದೆ ಇರುವುದು ಗಣಿಗಾರಿಕೆಯಲ್ಲಿ ತೊಡಗಿರುವವರ ಬೇಜವಾಬ್ದಾರಿ ವರ್ತನೆ. ಕಾನೂನಿನಲ್ಲಿ ಏನೇ ಕ್ರಮ ಕೈಗೊಂಡರು ಆ ಅಮಾಯಕ ಜೀವಗಳು ಹಿಂತಿರುಗುವುದಿಲ್ಲ ಎಂದು ನೋವು ವ್ಯಕ್ತಪಡಿಸಿದ್ದಾರೆ.
ಮಂಡ್ಯ ಜಿಲ್ಲೆಯಲ್ಲಿ ತಲೆಯೆತ್ತಿ ನಿಂತಿರುವ ಕಾನೂನು ಬಾಹಿರ ಗಣಿಗಾರಿಕೆಯ ವಿರುದ್ದ ನಾನು ಸತತ ಧ್ವನಿ ಎತ್ತುತ್ತಿರುವುದು ಇದೇ ಕಾಳಜಿಯಿಂದ. ಈ ಘಟನೆ ಮಂಡ್ಯದಲ್ಲಿ ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿರುವ ಎಲ್ಲರಿಗೂ ಎಚ್ಚರಿಕೆಯ ಗಂಟೆಯಾಗಬೇಕು. ಅಕ್ರಮ ಗಣಿಗಾರಿಕೆಯ ಹಿಂದೆ ಬಹಳ ಸಲ ಸ್ಥಳೀಯ ರಾಜಕಾರಣಿಗಳು ಹಾಗೂ ಕೆಲ ಭ್ರಷ್ಟ ಅಧಿಕಾರಿಗಳ ಸಹಕಾರವಿರುತ್ತದೆ. ಸರ್ಕಾರ ಈ ಕೂಡಲೇ ಎಲ್ಲಾ ಜಿಲ್ಲಾಡಳಿತ ಅಧಿಕಾರಿಗಳಿಗೆ ಅಕ್ರಮ ಗಣಿಗಾರಿಕೆಯ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಸೂಚಿಸಬೇಕೆಂದು ಸುಮಲತಾ ಒತ್ತಾಯಿಸಿದ್ದಾರೆ.
- ತಿರುಪತಿಯಲ್ಲಿ ಕಾಲ್ತುಳಿತ: 6 ಮಂದಿ ಸಾವು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ
- ಮೈಸೂರು ಜೈಲಿನಲ್ಲಿ ಮೂವರು ಕೈದಿಗಳ ದುರ್ಮರಣ
- ರಾಜ್ಯ ಸರ್ಕಾರದಿಂದ ಕಾರ್ಮಿಕರಿಗೆ ಮದುವೆ ಸಹಾಯಧನ: ₹60,000 ಪಡೆಯಲು ಅರ್ಜಿ ಆಹ್ವಾನ!
- ಮಾದಕ ವಸ್ತುಗಳ ಅಕ್ರಮ ಮಾರಾಟ: ಮೂವರು ಆರೋಪಿಗಳು ಬಂಧನ
- ಕೆನಡಾವನ್ನು ಅಮೆರಿಕಾದ 51ನೇ ರಾಜ್ಯವನ್ನಾಗಿ ಮಾಡಲು ಟ್ರಂಪ್ ಆರ್ಥಿಕ ಒತ್ತಡದ ಬೆದರಿಕೆ
More Stories
ತಿರುಪತಿಯಲ್ಲಿ ಕಾಲ್ತುಳಿತ: 6 ಮಂದಿ ಸಾವು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ
ಮೈಸೂರು ಜೈಲಿನಲ್ಲಿ ಮೂವರು ಕೈದಿಗಳ ದುರ್ಮರಣ
ರಾಜ್ಯ ಸರ್ಕಾರದಿಂದ ಕಾರ್ಮಿಕರಿಗೆ ಮದುವೆ ಸಹಾಯಧನ: ₹60,000 ಪಡೆಯಲು ಅರ್ಜಿ ಆಹ್ವಾನ!