ಶಾಸಕ ರೇಣುಕಾಚಾರ್ಯ ಸಹೋದರನ ಮಗ ಚಂದ್ರಶೇಖರ್ ಸಾವಿನ ಪ್ರಕರಣದ ಅಂತಿಮ ಹಂತಕ್ಕೆ ಬಂದಿದೆ.
ಈಗಾಗಲೇ ಮರಣೋತ್ತರ ಪರೀಕ್ಷೆ ವರದಿ ಪೊಲೀಸರ ಕೈ ಸೇರಿದೆ. ಮರಣೋತ್ತರ ಪರೀಕ್ಷೆಯ ಪ್ರಕಾರ ಶ್ವಾಸಕೋಶದ ಒಳಗೆ ನೀರು ನುಗ್ಗಿ ಸಾವನ್ನಪ್ಪಿದ್ದಾರೆ ಎಂಬ ವರದಿ ಬಂದಿದೆ.ನನ್ನನ್ನು ರಾಜಕೀಯವಾಗಿ ಮುಗಿಸಲು ನಿಖಿಲ್‍ರನ್ನು ಬಲಿ ಕೊಟ್ರು- ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ
ಅಪಘಾತ ಸಂಭವಿಸಿದೆಯಾ ಎಂಬುದನ್ನು ತಿಳಿಯಲು ವಿಧಿ ವಿಜ್ಞಾನ ಪ್ರಯೋಗಾಲಯದ (FSL) ವರದಿ ಈಗ ಪೊಲೀಸರ ಕೈಯಲ್ಲಿ ಇದೆ.
ಈ ವರದಿ ಪ್ರಕಾರ ಕಾರು ಅತಿಯಾದ ಸ್ಪೀಡ್‍ನಿಂದ ಡಿಕ್ಕಿ ಹೊಡೆದು ನೀರಿಗೆ ಬಿದ್ದಿದೆ ಎಂದಿದ್ದಾರೆ. ಪ್ರಕರಣದ ಮರುಸೃಷ್ಟಿಗೆ ತೆರಳಿದ್ದ ಖಾಸಗಿ ವಿಧಿ ವಿಜ್ಞಾನ ತಜ್ಞ ಫಣೀಂದ್ರ ಕೂಡ 40 ಪುಟಗಳ ವರದಿಯನ್ನು ನೀಡಿದ್ದಾರೆ. ವರದಿಯ ಪ್ರಕಾರ ಅಪಘಾತ ಸಂಭವಿಸಿದೆ ಎಂದು ವರದಿ ನೀಡಿದ್ದಾರೆ. ಒಂದು ಹಂತದ ಪರೀಕ್ಷೆ ಬಾಕಿ ಇದೆ ಎಂದು ಫಣೀಂದ್ರ ಸ್ಪಷ್ಟಪಡಿಸಿದ್ದಾರೆ.
ಅ.30ರ ಭಾನುವಾರ ಸಂಜೆ ಚಿಕ್ಕಮಗಳೂರು ಜಿಲ್ಲೆಯ ಗೌರಿಗದ್ದೆಗೆ ಹೋಗಿ ವಿನಯ್ ಗುರೂಜಿ ಆಶೀರ್ವಾದ ಪಡೆದಿದ್ದ ಚಂದ್ರು ರಾತ್ರಿ ಊರಿಗೆ ಮರಳಿದ್ದರು.
ರಾತ್ರಿ 11 ಗಂಟೆ ಸುಮಾರಿಗೆ ದೆಹಲಿಯ ಸ್ನೇಹಿತರ ಜೊತೆ ಕೊನೆಯದಾಗಿ ಮಾತಾಡಿ ಬಳಿಕ ರಾತ್ರಿ 11:30ಕ್ಕೆ ಹೊನ್ನಾಳಿ ಪಟ್ಟಣದಲ್ಲಿ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಅಲ್ಲಿಂದ ಸಿಗ್ನಲ್ ಪತ್ತೆಯಾಗಿರಲಿಲ್ಲ. ಶಿವಮೊಗ್ಗದಿಂದ ನ್ಯಾಮತಿ ತಾಲೂಕಿನ ಸುರಹೊನ್ನೆಗೆ ಬಂದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಲಭ್ಯವಾಗಿತ್ತು. ಆದಾದ ಬಳಿಕ ನ.3 ರಂದು ಚಂದ್ರಶೇಖರ್ ಅವರ ಕ್ರೇಟಾ ಕಾರು ಸೊರಟೂರು ಬಳಿ ಇರುವ ತುಂಗಾಭದ್ರ ಕಾಲುವೆಯಲ್ಲಿ ಪತ್ತೆಯಾಗಿತ್ತು. ಹೊನ್ನಾಳಿ ಹಾಗೂ ನ್ಯಾಮತಿ ಮಾರ್ಗ ಮಧ್ಯೆ ಇರುವ ಕಾಲುವೆಯಲ್ಲಿ ಪತ್ತೆಯಾದ ಕಾರನ್ನು ಮೇಲಕ್ಕೆತ್ತಿದಾಗ ಕಾರಿನಲ್ಲೇ ಚಂದ್ರು ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಆ ಬಳಿಕ ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗಿತ್ತು.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
More Stories
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
ಚುನಾವಣೆಗೂ ಮುನ್ನ ಕೇಜ್ರಿವಾಲ್ ಸಂಕಷ್ಟ – ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಇಡಿಗೆ ರಾಜ್ಯಪಾಲರ ಅನುಮತಿ
ನೆಲಮಂಗಲ ಟೀ ಬೇಗೂರು ಬಳಿ ಭೀಕರ ಸರಣಿ ಅಪಘಾತ: ಒಂದೇ ಕುಟುಂಬದ 6 ಮಂದಿ ಸಾವು