FSL ವರದಿಯಲ್ಲಿ ಚಂದ್ರು ಸಾವಿನ ಸ್ಫೋಟಕ ಸತ್ಯ: ಕೊಲೆ ಅಲ್ಲ ಎಂಬುದು ಅಷ್ಟೇ ನಿಜ ?

Team Newsnap
1 Min Read

ಶಾಸಕ ರೇಣುಕಾಚಾರ್ಯ ಸಹೋದರನ ಮಗ ಚಂದ್ರಶೇಖರ್‌ ಸಾವಿನ ಪ್ರಕರಣದ ಅಂತಿಮ ಹಂತಕ್ಕೆ ಬಂದಿದೆ.

ಈಗಾಗಲೇ ಮರಣೋತ್ತರ ಪರೀಕ್ಷೆ ವರದಿ ಪೊಲೀಸರ ಕೈ ಸೇರಿದೆ. ಮರಣೋತ್ತರ ಪರೀಕ್ಷೆಯ ಪ್ರಕಾರ ಶ್ವಾಸಕೋಶದ ಒಳಗೆ ನೀರು ನುಗ್ಗಿ ಸಾವನ್ನಪ್ಪಿದ್ದಾರೆ ಎಂಬ ವರದಿ ಬಂದಿದೆ.ನನ್ನನ್ನು ರಾಜಕೀಯವಾಗಿ ಮುಗಿಸಲು ನಿಖಿಲ್‍ರನ್ನು ಬಲಿ ಕೊಟ್ರು- ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ

ಅಪಘಾತ ಸಂಭವಿಸಿದೆಯಾ ಎಂಬುದನ್ನು ತಿಳಿಯಲು ವಿಧಿ ವಿಜ್ಞಾನ ಪ್ರಯೋಗಾಲಯದ (FSL) ವರದಿ ಈಗ ಪೊಲೀಸರ ಕೈಯಲ್ಲಿ ಇದೆ.

ಈ ವರದಿ ಪ್ರಕಾರ ಕಾರು ಅತಿಯಾದ ಸ್ಪೀಡ್‍ನಿಂದ ಡಿಕ್ಕಿ ಹೊಡೆದು ನೀರಿಗೆ ಬಿದ್ದಿದೆ ಎಂದಿದ್ದಾರೆ. ಪ್ರಕರಣದ ಮರುಸೃಷ್ಟಿಗೆ ತೆರಳಿದ್ದ ಖಾಸಗಿ ವಿಧಿ ವಿಜ್ಞಾನ ತಜ್ಞ ಫಣೀಂದ್ರ ಕೂಡ 40 ಪುಟಗಳ ವರದಿಯನ್ನು ನೀಡಿದ್ದಾರೆ. ವರದಿಯ ಪ್ರಕಾರ ಅಪಘಾತ ಸಂಭವಿಸಿದೆ ಎಂದು ವರದಿ ನೀಡಿದ್ದಾರೆ. ಒಂದು ಹಂತದ ಪರೀಕ್ಷೆ ಬಾಕಿ ಇದೆ ಎಂದು ಫಣೀಂದ್ರ ಸ್ಪಷ್ಟಪಡಿಸಿದ್ದಾರೆ.

ಅ.30ರ ಭಾನುವಾರ ಸಂಜೆ ಚಿಕ್ಕಮಗಳೂರು ಜಿಲ್ಲೆಯ ಗೌರಿಗದ್ದೆಗೆ ಹೋಗಿ ವಿನಯ್ ಗುರೂಜಿ ಆಶೀರ್ವಾದ ಪಡೆದಿದ್ದ ಚಂದ್ರು ರಾತ್ರಿ ಊರಿಗೆ ಮರಳಿದ್ದರು.

ರಾತ್ರಿ 11 ಗಂಟೆ ಸುಮಾರಿಗೆ ದೆಹಲಿಯ ಸ್ನೇಹಿತರ ಜೊತೆ ಕೊನೆಯದಾಗಿ ಮಾತಾಡಿ ಬಳಿಕ ರಾತ್ರಿ 11:30ಕ್ಕೆ ಹೊನ್ನಾಳಿ ಪಟ್ಟಣದಲ್ಲಿ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಅಲ್ಲಿಂದ ಸಿಗ್ನಲ್ ಪತ್ತೆಯಾಗಿರಲಿಲ್ಲ. ಶಿವಮೊಗ್ಗದಿಂದ ನ್ಯಾಮತಿ ತಾಲೂಕಿನ ಸುರಹೊನ್ನೆಗೆ ಬಂದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಲಭ್ಯವಾಗಿತ್ತು. ಆದಾದ ಬಳಿಕ ನ.3 ರಂದು ಚಂದ್ರಶೇಖರ್ ಅವರ ಕ್ರೇಟಾ ಕಾರು ಸೊರಟೂರು ಬಳಿ ಇರುವ ತುಂಗಾಭದ್ರ ಕಾಲುವೆಯಲ್ಲಿ ಪತ್ತೆಯಾಗಿತ್ತು. ಹೊನ್ನಾಳಿ ಹಾಗೂ ನ್ಯಾಮತಿ ಮಾರ್ಗ ಮಧ್ಯೆ ಇರುವ ಕಾಲುವೆಯಲ್ಲಿ ಪತ್ತೆಯಾದ ಕಾರನ್ನು ಮೇಲಕ್ಕೆತ್ತಿದಾಗ ಕಾರಿನಲ್ಲೇ ಚಂದ್ರು ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಆ ಬಳಿಕ ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗಿತ್ತು.

Share This Article
Leave a comment