December 23, 2024

Newsnap Kannada

The World at your finger tips!

VANDE BHARAT

ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ಬೆಳಗಾವಿಗೆ ಸಂಚಾರ ವಿಸ್ತರಣೆ

Spread the love

ಬೆಳಗಾವಿ: ಬಹು ದಿನಗಳ ಬೇಡಿಕೆಯಾದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಬೆಂಗಳೂರು- ಧಾರವಾಡದಿಂದ ಬೆಳಗಾವಿಯವರೆಗೆ ವಿಸ್ತರಣೆ ಮಾಡಿ ರೈಲ್ವೆ ಸಚಿವಾಲಯ ಆದೇಶಿಸಿದೆ .

ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಬೆಂಗಳೂರಿನಿಂದ ರೈಲು ಸಂಖ್ಯೆ (20661) ಪ್ರತಿ ದಿನ ಬೆಳಗ್ಗೆ 5:45ಕ್ಕೆ ಬೆಂಗಳೂರು ನಿಲ್ದಾಣದಿಂದ ಹೊರಟು ಮಧ್ಯಾಹ್ನ 1.30ಕ್ಕೆ ಬೆಳಗಾವಿ ತಲುಪಲಿದೆ.

ಬೆಳಗಾವಿಯಿಂದ ರೈಲು ಸಂಖ್ಯೆ (20662) ಮಧ್ಯಾಹ್ನ 2ಕ್ಕೆ ಹೊರಟು ರಾತ್ರಿ 10ಕ್ಕೆ ಬೆಂಗಳೂರು ನಿಲ್ದಾಣ ತಲುಪಲಿದೆ.ಕರುನಾಡ ಜಿಲ್ಲೆಗಳ ಕಿರು ಪರಿಚಯ – 15 – ಉಡುಪಿ 

ಶೀಘ್ರದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರದ ದಿನಾಂಕ ನಿಗದಿಯಾಗಲಿದೆ. ವಂದೇ ಭಾರತ್ ಬೆಳಗಾವಿ ವರೆಗೂ ವಿಸ್ತರಿಸುವಂತೆ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದರು.

Copyright © All rights reserved Newsnap | Newsever by AF themes.
error: Content is protected !!