ರಸಗೊಬ್ಬರ ಖರೀದಿಯ ಸಮಯ ವಿಸ್ತರಣೆ – ಬಿತ್ತನೆ ಕಾರ್ಯ ಆರಂಭ

Team Newsnap
3 Min Read
Pay Farmer Abhiyan from Mandya Farmers: Pay Rs 4500 per ton of sugarcane - farmers demand ಮಂಡ್ಯ ರೈತರಿಂದಲೂ ಪೇ ಫಾರ್ಮರ್ ಅಭಿಯಾನ : ಟನ್ ಕಬ್ಬಿಗೆ 4500 ರು ಕೊಡಿ - ರೈತರ ಒತ್ತಾಯ

ರಾಜ್ಯದಲ್ಲಿ ಮುಂಗಾರು ಬಿತ್ತನೆ ಆರಂಭಗೊಂಡಿರುವುದರಿಂದ ರೈತರ ಕೃಷಿ ಚಟುವಟಿಕೆಗಳು ಚುರುಕುಗೊಂಡಿದೆ. ರಸಗೊಬ್ಬರ ಬಿತ್ತನೆ ಬೀಜ ಖರೀದಿ ರೈತರಿಗೆ ಅಗತ್ಯವಾಗಿರುವುದನ್ನು ಗಮನಿಸಿದ ಸರ್ಕಾರ ರಸಗೊಬ್ಬರ ಬಿತ್ತನೆ ಬೀಜ ಖರೀದಿ ಸಮಯವನ್ನು ವಿಸ್ತರಿಸಿ ಆದೇಶಿಸಿದೆ.

ರಾಜ್ಯದಲ್ಲಿ ಪ್ರಸ್ತುತ ಜೂನ್ 7 ರವರೆಗೆ ಲಾಕ್ಡೌನ್ ಜಾರಿಯಲ್ಲಿದ್ದು, ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ 6 ರಿಂದ 10 ರವರೆಗೆ ಸಮಯ ನಿಗದಿಪಡಿಸಿದೆ. ಕೃಷಿ ಚಟುವಟಿಕೆಗಳಿಗೆ ಸಮಯದ ನಿರ್ಬಂಧ ವಿಧಿಸಿಲ್ಲ.ಆದರೂ ಬೆಂಗಳೂರು ಸೇರಿದಂತೆ ಕೆಲವೆಡೆ ರೈತರು ರಸಗೊಬ್ಬರ ಬಿತ್ತನೆ ಬೀಜ ಖರೀದಿಗೆ ಸಮಯದ ಅಭಾವದಿಂದ ಮುಗಿಬಿದ್ದು, ಸಾಮಾಜಿಕ ಅಂತರವಿಲ್ಲದೇ ಖರೀದಿಗೆ ಮುಂದಾಗುತ್ತಿರುವುದನ್ನು ಗಮನಿಸಿದ ಕೃಷಿ ಸಚಿವ ಬಿ.ಸಿ.ಪಾಟೀಲರು ಕೃಷಿ ಇಲಾಖೆ ಹಾಗೂ ಸರ್ಕಾರದೊಂದಿಗೆ ಚರ್ಚಿಸಿ ರೈತರಿಗೆ ಅಗತ್ಯ ರಸಗೊಬ್ಬರ ಬಿತ್ತನೆಬೀಜ ಪೂರೈಕೆ ಖರೀದಿ ಸಮಯವನ್ನು ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ವಿಸ್ತರಿಸಲಾಗಿದೆ. ಈ ಸಂಬಂಧ ಸರ್ಕಾರ ಕೂಡ ಆದೇಶ ಹೊರಡಿಸಿದೆ.

ಮಳೆ ವಿವರ:

2021-22 ನೇ ಸಾಲಿನ ಪೂರ್ವ ಮುಂಗಾರು ಹಂಗಾಮಿನಲ್ಲಿ ಮೇ.28ರವರೆಗೆ 105 ಮಿ.ಮೀ ಸಾಮಾನ್ಯ ಮಳೆಯಾಗಿದೆ, 159 ಮಿ.ಮೀ.ವಾಸ್ತವರಿಕ ಸರಾಸರಿ ಮಳೆ ಅಂದರೆ ಶೇ.51 ರಷ್ಟು ಮಳೆಯಾಗಿರುತ್ತದೆ.

ಆಹಾರ ಧಾನ್ಯಗಳು ಮತ್ತು ಎಣ್ಣೆಕಾಳುಗಳ ಉತ್ಪಾದನೆ ಗುರಿ:

2021-22 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 77 ಲಕ್ಷ ಹೆಕ್ಟೇರ್ ವಿಸ್ತೀರ್ಣ ಪ್ರದೇಶದಲ್ಲಿ ಬಿತ್ತನೆ ಕೈಗೊಳ್ಳುವ ಗುರಿ ಹೊಂದಿದೆ. 101.38 ಲಕ್ಷ ಟನ್ ಆಹಾರ ಧಾನ್ಯಗಳು ಹಾಗೂ 10.85 ಲಕ್ಷ ಟನ್ ಎಣ್ಣೆಕಾಳುಗಳ ಉತ್ಪಾದನೆ ಗುರಿ ಹೊಂದಲಾಗಿದೆ.

ಮೇ.28 ರವರೆಗಿನ ಬಿತ್ತನೆ ವಿವರ:

ಏಪ್ರಿಲ್ ಹಾಗೂ ಮೇ ತಿಂಗಳಿನಲ್ಲಿ ಪೂರ್ವ ಮುಂಗಾರುಮಳೆಯಿಂದಾಗಿ ಚಾಮರಾಜನಗರ, ಮಂಡ್ಯ, ಹಾಸ, ಚಿಕ್ಕಮಗಳೂರು,ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಭೂ ಸಿದ್ಧತೆ ಹಾಗೂ ಜೋಳ, ಹೆಸರು ಉದ್ದು, ಹಲಸಂದೆ, ಎಳ್ಳು, ಸೂರ್ಯಕಾಂತಿ, ಹತ್ತಿ, ತಂಬಾಕು ಸೇರಿದಂತೆ ಇತರೆ ಬೆಳೆಗಳ ಬಿತ್ತನೆ ಪ್ರಾರಂಭವಾಗಿದೆ. ಕರಾವಳಿ, ಮಲೆನಾಡು, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ನೈರುತ್ಯ ಮಾರುತ ಮಳೆಯು ಪ್ರಾರಂಭವಾದ ಬಳಿಕ ಭೂಮಿಸಿದ್ಧತೆ ಹಾಗೂ ಬಿತ್ತನೆ ಕಾರ್ಯಗಳು ಪ್ರಾರಂಭವಾಗಿವೆ.
ಚಾಮರಾಜನಗರ, ಮಂಡ್ಯ, ಹಾಸನ, ಚಿಕ್ಕಮಗಳೂರು, ತುಮಕೂರು,ಚಿತ್ರದುರ್ಗ ,ಮೈಸೂರು,ಬೆಳಗಾವಿ ಹಾಗೂ ರಾಮನಗರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಪೂರ್ವ ಮುಂಗಾರು ಮಳೆಯಾಗಿದ್ದು, ಕಳೆದ ಮೇ.28 ರವರೆಗೆ 3.06 ಲಕ್ಷ ಹೆಕ್ಟೇರ್ ವಿಸ್ತೀರ್ಣದಲ್ಲಿ ಬಿತ್ತನೆಯಾಗಿದೆ.ಇಲ್ಲಿಯವರೆಗಿನ ವರದಿ ಪ್ರಕಾರ 77.00 ಲಕ್ಷ ಹೆಕ್ಟೇರ್ ಬಿತ್ತನೆ ಗುರಿಗೆ ಪ್ರತಿಯಾಗಿ 3.06 ಲಕ್ಷ ಹೆಕ್ಟೇರ್ ವಿಸ್ತೀರ್ಣದಲ್ಲಿ ಶೇ.3.97ರಷ್ಟು ಬಿತ್ತನೆ ಬೀಜ ವಿತರಣೆಯಾಗಿದೆ.

ಬಿತ್ತನೆ ಬೀಜಕ್ಕಿಲ್ಲ ಯಾವುದೇ ಕೊರತೆ:

ಲಾಕ್ಡೌನ್ ಸಮಯದಲ್ಲಿಯೂ ಕೂಡ ಕೃಷಿಗಾಗಲೀ ರೈತಾಪಿ ಚಟುವಟಿಕೆಗಳಿಗಾಗಲೀ ಅಥವಾ ಕೃಷಿ ಯಂತ್ರೋಪಕರಣಗಳ ಖರೀದಿಗಾಗಲೀಯ ಯಾವುದೇ ನಿರ್ಬಂಧ ವಿಧಿಸಿಲ್ಲ. 2021-21ರ ಮುಂಗಾರುಹಂಗಾಮಿಗೆ ಅಂದಾಜು 6 ಲಕ್ಷ ಕ್ವಿಂಟಾಲ್ ಬಿತ್ತನೆ ಬೀಜಗಳಿಗೆ ಬೇಡಿಕೆಯಿದ್ದು, ಕಳೆದ ಮೇ.28 ರವರೆಗೆ ರೈತ ಸಂಪರ್ಕ ಕೇಂದ್ರಗಳಲ್ಲಿ ಇದುವರೆಗೂ 19675 ಕ್ವಿಂಟಾಲ್ ಗಳಷ್ಟು ಬಿತ್ತನೆ ಬೀಜ ವಿತರಿಸಲಾಗಿದೆ 1,74,653ಕ್ವಿಂಟಾಲ್ ಗಳಷ್ಟು ಇನ್ನೂ ದಾಸ್ತಾನು ಇದೆ.ಅಗತ್ಯಕ್ಕೆ ತಕ್ಕಂತೆ ಬಿತ್ತನೆ ಬೀಜ ಪೂರೈಸಲಾಗುತ್ತಿದ್ದು, ಬಿತ್ತನೆ ಬೀಜ ಪೂರೈಕೆಗೆ ಯಾವುದೇ ಕೊರತೆ ಇರುವುದಿಲ್ಲ.

ರಾಸಾಯನಿಕ ಗೊಬ್ಬರ ಕ್ಕೆ ಬೇಡಿಕೆ :

2021-22 ರ ಮುಂಗಾರು ಹಂಗಾಮಿನಲ್ಲಿಒಟ್ಟು 26.47 ಲಕ್ಷ ಮೆಟ್ರಿಕ್ ಟನ್ ವಿವಿಧ ರಾಸಾಯನಿಕ ಗೊಬ್ಬರಗಳಿಗೆ ಬೇಡಿಕೆಯಿದೆ. ಇದರಲ್ಲಿ ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ 7,97,662 ಮೆಟ್ರಿಕ್ ಟನ್ ರಸಗೊಬ್ಬರಗಳಿಗೆ ಬೇಡಿಕೆಯಿದೆ ಮೇ.28 ರವರೆಗೆ ಒಟ್ಟು 5,67,239 ಮೆಟ್ರಿಕ್ ಟನ್ ಪ್ರಮಾಣದಲ್ಲಿ ರಸಗೊಬ್ಬರ ಸರಬರಾಜಾಗಿದೆ.

ಅಲ್ಲದೇ ಇನ್ನೂ ಒಟ್ಟು 12,38,600 ಮೆಟ್ರಿಕ್ ಟನ್ ಗಳಷ್ಟು ರಸಗೊಬ್ಬರ ದಾಸ್ತಾನು ಇದ್ದು, ಯಾವುದೇ ರಸಗೊಬ್ಬರಕ್ಕೆ ಇರುವುದಿಲ್ಲ.

Share This Article
Leave a comment