ಬೆಂಗಳೂರು : ಯುವತಿಯನ್ನು ‘ಮದ್ಯ ಸೇವಿಸಿ ಕಾರು ಚಲಾಯಿಸುತ್ತಿದ್ದೀರಾ’ ಎಂದು ಬೆದರಿಸಿ ಹಣದ ಪಡೆದಿದ್ದ ಆರೋಪದ ಮೇರೆಗೆ ಜೀವನ್‌ಬಿಮಾ ನಗರ ಸಂಚಾರ ಪೊಲೀಸ್ ಠಾಣೆಯ ನಾಲ್ವರು ಸಿಬ್ಬಂದಿಯನ್ನು ನಗರ ಪೊಲೀಸ್ ಕಮಿಷನರ್ ದಯಾನಂದ್ ಅಮಾನತು ಮಾಡಿದ್ದಾರೆ.
ಇನ್‌ಸ್ಪೆಕ್ಟರ್ ವೆಂಕಟಾಚಲಪತಿ, ಹೆಡ್ ಕಾನ್‌ಸ್ಟೆಬಲ್‌ಗಳಾದ ಗಿರೀಶ್, ಕಡೇಮನಿ ಹುಚ್ಚು ಸಾಬ್ ಹಾಗೂ ಕಾನ್‌ಸ್ಟೆಬಲ್ ಬಸಪ್ಪ ಸಂಚಾರ ವಿಭಾಗದ ಅಮಾನತುಗೊಂಡ ಸಿಬ್ಬಂದಿ.
‘ಎಕ್ಸ್’ ಖಾತೆಯಲ್ಲಿ ಯುವತಿಯ ತಂದೆ ಘಟನೆ ವಿವರ ಬರೆದು, ಪೊಲೀಸ್ ಅಧಿಕಾರಿಗಳಿಗೆ ಟ್ಯಾಗ್ ಮಾಡಿದ್ದರು. ಈ ದೂರು ಆಧರಿಸಿ, ತನಿಖೆ ನಡೆಸಿ ನಾಲ್ವರನ್ನು ಅಮಾನತು ಮಾಡಲಾಗಿದೆ .
ಆರಂಭದಲ್ಲಿ 15 ಸಾವಿರ ಕೇಳಿದ್ದು , ಅಷ್ಟು ಹಣವಿಲ್ಲವೆಂದು ಮಗಳು ಹೇಳಿದ್ದಳು. ಸುಮ್ಮನಾಗದ ಪೊಲೀಸರು, ಗೂಗಲ್ ಪೇ ಮೂಲಕ 5,000 ಹಣ ಪಡೆದಿದ್ದರು. ತಪಾಸಣೆ ವೇಳೆ ಮಹಿಳಾ ಸಿಬ್ಬಂದಿ ಸಹ ಸ್ಥಳದಲ್ಲಿ ಇರಲಿಲ್ಲ ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.
ಪಾನಮತ್ತರಾಗಿ ಚಾಲನೆ ಮಾಡುತ್ತಿದ್ದ ಚಾಲಕರನ್ನು ತಡೆದು ಪ್ರಕರಣ ದಾಖಲಿಸುತ್ತಿದ್ದರು. ಅದೇ ರಸ್ತೆಯಲ್ಲಿ ಯುವತಿ ಕಾರಿನಲ್ಲಿ ಬರುತ್ತಿದ್ದರು. ಕಾರು ತಡೆದು ಆಲ್ಕೋಮೀಟರ್‌ನಿಂದ ಯುವತಿಯನ್ನು ಪರೀಕ್ಷಿಸಿದ್ದ ಕಾನ್‌ಸ್ಟೆಬಲ್‌ಗಳು, ನೀವು ಮದ್ಯ ಕುಡಿದಿದ್ದೀರಾ ಎಂದು ಹೇಳಿ 15 ಸಾವಿರಕ್ಕೆ ಬೇಡಿಕೆ ಇಟ್ಟಿದ್ದಾರೆ.
ಹಣ ಕೊಡದಿದ್ದರೆ ಪ್ರಕರಣ ದಾಖಲಿಸಿ ಕಾರು ಜಪ್ತಿ ಮಾಡುವುದಾಗಿ ಬೆದರಿಕೆ ಹಾಕಿದ್ದು , ಹಣವಿಲ್ಲವೆಂದು ಯುವತಿ ಹೇಳಿದ ಕಾರಣ ಮೊಬೈಲ್‌ನಿಂದ ಗೂಗಲ್ ಪೇ ಮಾಡಿಸಿಕೊಂಡಿದ್ದಾರೆ.ಪಾಕಿಸ್ತಾನ ಪರ ಘೋಷಣೆ : ಪೊಲೀಸರು ಎಫ್‌ಎಸ್‌ಎಲ್‌ಗೆ ವೀಡಿಯೋ ಕಳುಹಿಸಲು ತಯಾರಿ
ಮೇಲ್ನೋಟಕ್ಕೆ ಆರೋಪವು ಸಾಬೀತಾಗಿದ್ದು ,ನಾಲ್ವರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ