ಮದುವೆ ಮಾಡಿಕೊಳ್ಳಲು ನಿರಾಕರಿಸಿದ ಕಾರಣಕ್ಕೆ ಮಹಿಳೆಯೊಬ್ಬಳು ಯುವಕನ ಮೇಲೆ ಆ್ಯಸಿಡ್ ದಾಳಿ ನಡೆಸಿರುವ ಘಟನೆ ನವೆಂಬರ್ 16 ರಂದು ಕೇರಳದ ತಿರುವನಂತಪುರಂನಲ್ಲಿ ತಡವಾಗಿ ಬೆಳಕಿಗೆ ಬಂದಿದೆ
ಆ್ಯಸಿಡ್ ದಾಳಿಗೆ ಒಳಗಾಗಿರುವ ಯುವಕ ಅರುಣ್ (28)ಕುಮಾರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆ್ಯಸಿಡ್ ದಾಳಿ ಮಾಡಿದ 35 ವರ್ಷದ ಮಹಿಳೆ ಷಿಬಾಳನ್ನು ಪೊಲೀಸರು ಬಂಧಿಸಿದ್ದಾರೆ.
ಘಟನೆ ಸಂದರ್ಭದಲ್ಲಿ ಮಹಿಳೆಗೂ ಆ್ಯಸಿಡ್ನಿಂದ ಗಾಯಗಳಾಗಿವೆ ಯುವಕನ ದೂರಿನ ಅನ್ವಯ ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ. ಆ್ಯಸಿಡ್ ದಾಳಿಗೆ ಒಳಗಾಗಿರುವ ಯುವಕ ತನ್ನ ದೃಷ್ಟಿಯನ್ನು ಕಳೆದುಕೊಂಡಿದ್ದು, ಮುಖ ಹಾಗೂ ಕುತ್ತಿಗೆ ಭಾಗ ಸಂಪೂರ್ಣವಾಗಿ ಸುಟ್ಟು ಹೋಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಿಸಿಟಿವಿಯಲ್ಲಿ ದೃಶ್ಯ ದಾಖಲು :
ಯುವತಿ ಆ್ಯಸಿಡ್ ದಾಳಿ ನಡೆಸಿದ ದೃಶ್ಯಗಳು ಸಿಸಿಟಿವಿ ದೃಶ್ಯದಲ್ಲಿ ದಾಖಲಾಗಿವೆ
ಈ ಮಹಿಳೆಗೆ ಫೇಸ್ಬುಕ್ನಲ್ಲಿ ಯುವಕನ ಪರಿಚಯವಾಗಿ ಇಬ್ಬರ ನಡುವೆ ಕೆಲ ಸಮಯದ ಬಳಿಕ ಪ್ರೇಮಾಂಕುರವಾಗಿತ್ತು ಎನ್ನಲಾಗಿದೆ.
ಆದರೆ ಆಕೆಗೆ ಈಗಾಗಲೇ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ ಎಂದು ತಿಳಿದ ಬಳಿಕ ಯುವಕ ಮಹಿಳೆಯಿಂದ ದೂರವಾಗಲು ಮುಂದಾದ .
ಮಹಿಳೆ ಮಾತ್ರ ಯುವಕನನ್ನು ಬ್ಲ್ಯಾಕ್ ಮೇಲ್ ಮಾಡಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದಳಂತೆ. ಇದಕ್ಕೆ ಯುವಕ ಒಪ್ಪದ ಕಾರಣ ಆ್ಯಸಿಡ್ ಮಾಡಿದ್ದಾಳೆ ಎಂದು ಹೇಳಲಾಗಿದೆ.
- ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
- ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ
- ಮರಕ್ಕೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ
- ಬ್ಯಾಂಕ್ ಆಫ್ ಬರೋಡಾ: 1267 ಹುದ್ದೆಗಳಿಗೆ ಅರ್ಜಿ ಆಹ್ವಾನ
- ಏಕಾದಶಿ ಉಪವಾಸದ ಬಗ್ಗೆ ವೈಜ್ಞಾನಿಕ ಚಿಂತನೆ ಏನು ಹೇಳುತ್ತದೆ?
More Stories
ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ
ಮರಕ್ಕೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ
ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಆಯುಕ್ತ ಮತ್ತು ಸಹಾಯಕ ಕಾರ್ಯಪಾಲಕ ಇಂಜಿನಿಯರ್