ಸಂಧಾನ ವಿಫಲ- ನಾಳೆಯಿಂದ ಬಸ್ ಸಂಚಾರವಿಲ್ಲ : ಮುಷ್ಕರ ಮುಂದುವರಿಕೆ ಅಧ್ಯಕ್ಷ ಚಂದ್ರು ಪ್ರಕಟ

Team Newsnap
1 Min Read

ಸಾರಿಗೆ ನೌಕರರ ಜೊತೆ ಸಂಧಾನ ಮಾತುಕತೆ ಯಶಸ್ವಿಯಾಯಿತು ಎಂದು ನಿಟ್ಟುಸಿರು ಬಿಡುವ ಹೊತ್ತಿಗೆ ಸಾರಿಗೆ ನೌಕರರು ಸರ್ಕಾರಕ್ಕೆ ಮತ್ತೆ ಶಾಕ್​ ನೀಡಿದ್ದಾರೆ.

ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವವರೆಗೆ ಮುಷ್ಕರ ಮುಂದುವರಿಸಲು ನಿರ್ಧರಿಸಿದ್ದಾರೆ. ಇದರಿಂದ ಸರ್ಕಾರಕ್ಕೆ ಮತ್ತೆ ಸಂಕಷ್ಟ ಎದುರಾಗಿದೆ.

ಬಸ್ ತೆಗೆಯಬೇಡಿ , ನೌಕರರಿಗೆ ಮನವಿ

ಫ್ರೀಂಡಂ ಪಾರ್ಕ್​ನಲ್ಲಿ ಮಾತನಾಡಿದ ಕೆಎಸ್ ಆರ್ ಟಿಸಿ ನೌಕರರ ಸಂಘದ ರಾಜ್ಯಾಧ್ಯಕ್ಷ ಚಂದ್ರು, ಸಾರಿಗೆ ಸಚಿವರ ಜತೆ ನಡೆಸಿದ ಸಂಧಾನ ವಿಫಲವಾಗಿದೆ ಎಂದು ಹೇಳಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದರು.‌

ನಮ್ಮ ಸಿಬ್ಬಂದಿಯನ್ನು ಸರ್ಕಾರಿ ನೌಕರರೆಂದು ಪರಿಗಣಿಸಲೇಬೇಕು. ಅಲ್ಲಿಯವರೆಗೆ ನಮ್ಮ ಹೋರಾಟ ಮುಂದುವರಿಯಲಿದೆ. ಘೋಷಣೆ ಮಾಡುವವರೆಗೂ ಯಾರೂ ಬಸ್​ ತೆಗೆಯಬೇಡಿ ಎಂದು ನೌಕರರಲ್ಲಿ ಮನವಿ ಮಾಡಿದ ಚಂದ್ರು ಉಲ್ಟಾ ಹೊಡೆದರು .

ಯಶಸ್ವಿ ಎಂದು ಹೇಳಿದವರೇ ಉಲ್ಟಾ !

ವಿಕಾಸಸೌಧದಲ್ಲಿ ಇಂದು ಸಂಘದ ರಾಜ್ಯಾಧ್ಯಕ್ಷ ಚಂದ್ರು ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಸೇರಿ ಅನೇಕರು ಸಂಧಾನ ಮಾತುಕತೆ ನಡೆಸಿದ್ದರು.

ಮಾತುಕತೆ ಮುಗಿಸಿ ಹೊರ ಬಂದ ನಂತರ ಮಾತನಾಡಿದ್ದ ಚಂದ್ರು, ಸಂಧಾನ ಯಶಸ್ವಿ ಆಗಿದೆ ಎಂದು ಹೇಳಿದ್ದರು.

ಆದರೆ, ಫ್ರೀಂಡಂ ಪಾರ್ಕ್​ ಬಂದ ನಂತರದಲ್ಲಿ ಚಂದ್ರು ಉಲ್ಟಾ ಹೊಡೆದಿದ್ದಾರೆ. ಸರ್ಕಾರದ ಜತೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಬೇಕಿದೆ. ಈಗಿನ ಮಾತುಕತೆ ವಿಫಲವಾಗಿದೆ. ಹೀಗಾಗಿ, ಯಾರೂ ಬಸ್​ ತೆಗೆಯಬಾರದು ಎಂದು ಕೋರಿದ್ದಾರೆ.

Share This Article
Leave a comment