December 27, 2024

Newsnap Kannada

The World at your finger tips!

fake

source - google credits- news 18

ಡಾಕ್ಟರೇಟ್ ನೀಡಲು ಮುಂದಾದ ನಕಲಿ ವಿವಿ; ಪೋಲೀಸರ ದಾಳಿ

Spread the love

ನಕಲಿ ವಿಶ್ವವಿದ್ಯಾಲಯದ ಹೆಸರಿನ ಮೂಲಕ ಗೌರವ ಡಾಕ್ಟರೇಟ್ ನೀಡಲು ಮುಂದಾದ ಘಟನೆ ಮೈಸೂರಿನ ವಿಜಯನಗರದಲ್ಲಿ ನಡೆದಿದೆ.

ಮೈಸೂರಿನ ಖಾಸಗಿ ಹೋಟೆಲೊಂದರಲ್ಲಿ ಇಂಟರ್‌ನ್ಯಾಷನಲ್ ಗ್ಲೋಬಲ್ ಪೀಸ್ ವಿಶ್ವವಿದ್ಯಾಲಯ ಎಂಬ ನಕಲಿ ಹೆಸರಿನಲ್ಲಿ ಕಾರ್ಯಕ್ರಮ ಆಯೋಜಿಸಿದ್ದ ಆಯೋಜಕರ ಬಗ್ಗೆ ಖಚಿತ ಮಾಹಿತಿ ದೊರಕಿದ ಹಿನ್ನಲೆಯಲ್ಲಿ, ಡಿಸಿಪಿ ಪ್ರಕಾಶ್ ಗೌಡ ದಾಳಿ‌ ನಡೆಸಿದ್ದಾರೆ.

ದುಷ್ಕರ್ಮಿಗಳು 150 ಜನರಿಂದ ಹಣ ಪಡೆದು ಗೌರವ ಡಾಕ್ಟರೇಟ್ ನೀಡಲು ಮುಂದಾಗಿದ್ದರು. ಕೇವಲ ರಾಜ್ಯ ಮಾತ್ರವಲ್ಲದೇ ದೇಶದ ಇತರೆ ಭಾಗಗಳಲ್ಲೂ ಇದೇ ರೀತಿಯ ಕಾರ್ಯಕ್ರಮಗಳನ್ನು ದುಷ್ಕರ್ಮಿಗಳು ಆಯೋಜಿಸಿದ್ದರು ಎಂದು ತಿಳಿದು ಬಂದಿದೆ.

ನಕಲಿ‌ದಂಧೆಯ ಬಗ್ಗೆ ತಿಳಿಯದ ಹರಿಹರದ ಶಾಸಕ ರಾಮಪ್ಪ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಪೋಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸುತ್ತಿದ್ದಂತೆಯೇ ಉಳಿದ ಆಯೋಜಕರು ಪರಾರಿಯಾಗಿದ್ದಾರೆ. ವಿಜಯನಗರ ಠಾಣಾ ವ್ಯಾಪ್ತಿಯಲ್ಲಿ ದೂರನ್ನು ದಾಖಲಿಸಿಕೊಂಡಿರುವ ಪೋಲೀಸರು, ಕಾರ್ಯಕ್ರಮದ ಪ್ರಶಸ್ತಿ ಪತ್ರ, ಸ್ಮರಣಿಕೆಗಳನ್ನು ವಶಕ್ಕೆ ಪಡೆದಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!