December 19, 2024

Newsnap Kannada

The World at your finger tips!

Facebook,whatsapp,ciber crime

Fake Fb account, WhatsApp message in DC name; demanded money ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ, ವಾಟ್ಸಪ್ ಮೆಸೇಜ್; ಹಣಕ್ಕೆ ಕಿಡಿಗೇಡಿಗಳಿಂದ ಬೇಡಿಕೆ

ಮಂಡ್ಯ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ, ವಾಟ್ಸಪ್ ಮೆಸೇಜ್; ಹಣಕ್ಕೆ ಕಿಡಿಗೇಡಿಗಳಿಂದ ಬೇಡಿಕೆ

Spread the love

ಮಂಡ್ಯ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದಿರುವ ಕಿಡಿಗೇಡಿಗಳು ಹಣಕ್ಕಾಗಿ ಬೇಡಿಕೆ ಇಟ್ಟಿರುವ ಘಟನೆ ಜಿಲ್ಲೆಯಲ್ಲಿ ಜರುಗಿದೆ.

ಜಿಲ್ಲಾಧಿಕಾರಿ ಎಸ್.ಅಶ್ವಿಥಿ ಹೆಸರಲ್ಲಿ ನಕಲಿ ವಾಟ್ಸಪ್, ನಕಲಿ ಫೇಸ್ ಬುಕ್ ಖಾತೆ ತೆರೆದಿದ್ದಾರೆ, ಮೆಸೇಜ್ ಗಳ ಮೂಲಕ ಹಣಕ್ಕಾಗಿ ಬೇಡಿಕೆ ಇಡುತ್ತಿದ್ದಾರೆ.

ತುರ್ತಾಗಿ ಹಣ ಬೇಕು ಎಂದು ಹಲವರಿಗೆ ವಾಟ್ಸಪ್ ಸಂದೇಶ ರವಾನಿಸಿದ್ದಾರೆ.ಇದನ್ನು ಓದಿ –ಸಿಂಗಾಪುರ ಓಪನ್‌ ಬ್ಯಾಡ್ಮಿಂಟನ್: ಚಾಂಪಿಯನ್ ಪಟ್ಟಕ್ಕೆ ಏರಿದ ಪಿವಿ ಸಿಂಧು

ವಾಟ್ಸಪ್ ಹಾಗೂ ಫೇಸ್ ಬುಕ್ ನಕಲಿ ಖಾತೆ ಕ್ರಿಯೇಟ್ ಮಾಡಿ ಡಿಸಿ ಎಸ್.ಅಶ್ವತಿ ಅವರ ಫೋಟೋಗಳನ್ನು ಬಳಸಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಜಿಲ್ಲಾಧಿಕಾರಿ ಸೈಬರ್ ಕ್ರೈಂ ಗೆ ದೂರು ನೀಡಿದ್ದು, ತಮ್ಮ ಹೆಸರಲ್ಲಿ ಹಣ ನೀಡುವಂತೆ ಯಾರಿಗಾದರೂ ಸಂದೇಶ ಬಂದರೆ ಹಣ ನೀಡದಂತೆ ಮನವಿ ಮಾಡಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!