ನಕಲಿ ಚಿನ್ನ ಅಡವಿಟ್ಟು ಬ್ಯಾಂಕಿಗೆ ವಂಚಿಸಿದ್ದ ಸಿನಿಮಾ ನಿರ್ದೇಶಕ ಸೇರಿ ಇಬ್ಬರನ್ನು ಬಂಧಿಸಲಾಗಿದೆ.
ಬಸವೇಶ್ವರನಗರ ನಿವಾಸಿ ಕರಮಲ ಬಾಲ ರವೀಂದ್ರನಾಥ್ ಹಾಗೂ ಶಿವಕುಮಾರ್ ಬಂಧಿತರು.
ರಾಜಾಜಿನಗರದ ಫೆಡರಲ್ ಬ್ಯಾಂಕ್ ಶಾಖೆಯಲ್ಲಿ 1 ಕೆಜಿ ಚಿನ್ನ ಅಡವಿಟ್ಟು 42 ಲಕ್ಷ ರೂಪಾಯಿ ಸಾಲ ಪಡೆದು ವಂಚಿಸಿದ್ದಾರೆ.
ನಿರ್ದೇಶಕ ರವೀಂದ್ರನಾಥ್ ಮತ್ತು ಆತನ ಪರಿಚಿತ ಚಿನ್ನಾಭರಣ ವ್ಯಾಪಾರಿ ಶಿವಕುಮಾರ್ ನಕಲಿ ಚಿನ್ನ ಅಡವಿಟ್ಟು 42 ಲಕ್ಷ ರೂಪಾಯಿ ಸಾಲ ಪಡೆದುಕೊಂಡಿದ್ದರೂ ಬಡ್ಡಿ ಪಾವತಿಸಿರಲಿಲ್ಲ.
ಬ್ಯಾಂಕಿನಿಂದ ಹಲವು ಬಾರಿ ನೋಟಿಸ್ ಜಾರಿ ಮಾಡಿ ಎಂದು ಡಿಫಾಲ್ಟರ್ ಎಂದು ಪರಿಗಣಿಸಲಾಗಿದೆ. ಹರಾಜು ಮೂಲಕ ಚಿನ್ನ ಮಾರಾಟ ಮಾಡಲು ನಿರ್ಧರಿಸಿದ ಬ್ಯಾಂಕಿನ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಅದು ನಕಲಿ ಚಿನ್ನ ಎನ್ನುವುದು ಗೊತ್ತಾಗಿದೆ.
ಬೆಂಗಳೂರಿನ ರಾಜಾಜಿನಗರ ಠಾಣೆಗೆ ದೂರು ನೀಡಿದ ನಂತರ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ