ಮಂಡ್ಯದಲ್ಲಿ ಸಾವಿರಾರು ನಕಲಿ ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್, ಪಾಸ್ ಪೋರ್ಟ್, ಮಾರ್ಕ್ಸ್ ಕಾರ್ಡ್ ಮಾಡಿಕೊಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದಂಪತಿ ತೌಸಿಫ್ ಉ. ದಡಕನ್ ಹಾಗೂ ಪತ್ನಿ ಹೀನಾ ಕೌಸರ್ ಅವರನ್ನು ಸೆಂಟ್ರಲ್ ಠಾಣಾ ಪೊಲೀಸರು ಬಂಧಿಸಿದ್ದಾರೆ.
ನಗರದ ಹೊಳಲು ರಸ್ತೆಯಲ್ಲಿ ಡಿ.ಕೆ.ಎಚ್. ಅಸೋಸಿಯೇಟ್ಸ್ ಹೆಸರಿನಲ್ಲಿ ಸಿಎಸ್‌ಐ ಸಲಹಾ ಕೇಂದ್ರ ನಡೆಸುತ್ತಿದ್ದ ತೌಸಿಫ್ ಮತ್ತು ಹೀನಾ ಕೌಸರ್ ಅವರು ನಕಲಿ ಪಾಸ್ ಪೋರ್ಟ್, ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್, ಮಾರ್ಕ್ಸ್ ಕಾರ್ಡ್ ಗಳನ್ನು ಮಾಡಿಕೊಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ಬಂಧನ ಮಾಡಲಾಗಿದೆ.
ಬೆಂಗಳೂರಿನ ಮಾದೇಶ್ವರ ನಗರದ ಸ್ವಪ್ನ ಕೋಂ ಅಪ್ಪಿ ಎಂಬವರು ಕಳೆದ ಆ. 24 ರಂದು ಡಿ.ಕೆ.ಎಚ್. ಅಸೋಸಿಯೇಟ್ಸ್ ನ ಲ್ಲಿ ನಕಲಿ ಮತದಾರರ ಚೀಟಿ, ಆಧಾರ್ ಕಾರ್ಡ್, ಪಾಸ್‌ಪೋರ್ಟ್, ಪಾನ್ ಕಾರ್ಡ್, ಮಾರ್ಕ್ಸ್ ಕಾರ್ಡ್ ಹಾಗೂ ಇತರೆ ದಾಖಲೆಗಳನ್ನು ಮಾಡಿಕೊಡಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದರು.
ಆದರೆ ಸಾಕ್ಷ್ಯಿಗಳ ಸಮೇತ ತಹಸಿಲ್ದಾರ್ ಚಂದ್ರಶೇಖರ್ ಶಂ. ಗಾಳಿ ಅವರಿಗೆ ದೂರು ನೀಡಲಾಗಿ, ತಮ್ಮ ಸಿಬ್ಬಂದಿಯೊಂದಿಗೆ ಡಿ.ಕೆ.ಎಚ್. ಅಸೋಸಿಯೇಟ್ಸ್ ಗೆ ತೆರಳಿ ಪರಿಶೀಲಿಸಿ, ಲ್ಯಾಪ್‌ಟಾಪ್ ವಶಪಡಿಸಿಕೊಂಡಿದ್ದರು.
ಬುಧವಾರ ಸೆಂಟ್ರಲ್ ಠಾಣೆ ಪೊಲೀಸರು ಆರೋಪಿ ದಂಪತಿಯನ್ನು ವಶಕ್ಕೆ ಪಡೆದಿದ್ದಾರೆ.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
More Stories
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
ಸಚಿವ ಸ್ಥಾನ ನನ್ನ ಹಕ್ಕು, ಬೇಡಿಕೆಯಲ್ಲ: ನಿಖರ ಹೇಳಿಕೆ ನೀಡಿದ ‘ಕೈ’ ಶಾಸಕ ನರೇಂದ್ರ ಸ್ವಾಮಿ