December 26, 2024

Newsnap Kannada

The World at your finger tips!

narayan swamy pondi1

ಪುದುಚೇರಿಯ ಕಾಂಗ್ರೆಸ್ ಸರ್ಕಾರ ಪತನ – ಸಿಎಂ ನಾರಾಯಣ ಸ್ವಾಮಿ ರಾಜೀನಾಮೆ

Spread the love

ಬಹುಮತ ಸಾಬೀತುಪಡಿಸುವಲ್ಲಿ ವಿಫಲವಾದ ಹಿನ್ನೆಲೆ ಪುದುಚೇರಿಯ ಕಾಂಗ್ರೆಸ್ ಸರ್ಕಾರ ಕೊನೆಗೂ ಪತನವಾಗಿದೆ.

ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಹ ನೀಡಿದ್ದಾರೆ
ವಿಧಾನಸಭೆಯಲ್ಲಿ ಬಹುಮತ ಸಾಬೀತು ಮಾಡುವಲ್ಲಿ ನಾರಾಯಣಸ್ವಾಮಿ ಸರ್ಕಾರ ವಿಫಲವಾಯ್ತು.

ಕಾಂಗ್ರೆಸ್‍ನ 9 ಶಾಸಕರು, ಡಿಎಂಕೆಯ 3 ಮತ್ತು ಪಕ್ಷೇತರ ಓರ್ವ ಶಾಸಕ ಸೇರಿದಂತೆ ಸರ್ಕಾರದ ಪರವಾಗಿದ್ದರು.

ಕಳೆದ ರಾತ್ರಿ ಡಿಎಂಕೆಯ ಓರ್ವ ಶಾಸಕ ರಾಜೀನಾಮೆ ನೀಡಿದ್ದರಿಂದ ಕಾಂಗ್ರೆಸ್‍ಗೆ ಕೇವಲ 12 ಶಾಸಕರ ಬೆಂಬಲ ಸಿಕ್ಕಿತ್ತು. ಆದ್ರೆ ಬಹುಮತಕ್ಕೆ 14 ಮತಗಳು ಬೇಕಿತ್ತು.

33 ಸದಸ್ಯರ ಪುದುಚೇರಿಯ ವಿಧಾನಸಭೆಯಲ್ಲಿ ಮೂವರು ಕೇಂದ್ರ ಸರ್ಕಾರದಿಂದ ನೇಮಕ ಆಗಿರುತ್ತಾರೆ. ಇನ್ನುಳಿದ 30 ಸದಸ್ಯರು ಜನರಿಂದ ನೇರವಾಗಿ ಆಯ್ಕೆಯಾಗಿ ವಿಧಾನಸಭೆ ಪ್ರವೇಶಿಸಿರುತ್ತಾರೆ.

2016ರ ಚುನಾವಣೆಯಲ್ಲಿ ಕಾಂಗ್ರೆಸ್ 15 ಕ್ಷೇತ್ರಗಳಲ್ಲಿ ಗೆಲುವು ಕಂಡಿತ್ತು. ಓರ್ವ ಶಾಸಕರನ್ನ ಕಾಂಗ್ರೆಸ್ ಉಚ್ಛಾಟಿತಗೊಳಿಸಿದರೆ, ಐವರು ಶಾಸಕರು ರಾಜೀನಾಮೆ ನೀಡಿದ್ದಾರೆ. ಇದರಿಂದಾಗಿ ಬಹುಮಾನ ಸಾಬೀತು ಪಡಿಸುವ ಮುನ್ನವೇ ಸಿಎಂ ರಾಜೀನಾಮೆ ನೀಡಿ ಅಧಿಕಾರ ತ್ಯಾಗ ಮಾಡಿದರು.

Copyright © All rights reserved Newsnap | Newsever by AF themes.
error: Content is protected !!