ಈಗ ಜಲಾಶಯದಲ್ಲಿ 25 ಟಿಎಂಸಿಯಷ್ಟು ನೀರು ಮಾತ್ರ ಸಂಗ್ರಹವಾಗಿದೆ. ಮತ್ತೆ ಮಳೆಯಾಗದಿದ್ದರೆ ಡಿಸೆಂಬರ್ ವೇಳೆಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದೆ.
ಕೆಆರ್‍ಎಸ್ ಡ್ಯಾಂನಿಂದ ತಮಿಳುನಾಡಿಗೆ ನೀರು ಬಿಡುಗಡೆ ವಿಚಾರಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಆದರೂ ತಮಿಳುನಾಡಿಗೆ ನೀರು ಹರಿಸಲಾಗಿತ್ತು. ಇದರಿಂದ ಕೆಆರ್‍ಎಸ್ ಡ್ಯಾಂ ನೀರಿನ ಮಟ್ಟ ಕುಸಿತವಾಗಿದೆ. 15 ದಿನಗಳ ಹಿಂದೆ 113 ಅಡಿ ನೀರು ಸಂಗ್ರಹವಾಗಿತ್ತು. ಈಗ 102 ಅಡಿಗೆ ಕುಸಿತ ಕಂಡಿದೆ. ಈಗ ನೀರು ಹರಿಸುವುದನ್ನು ನಿಲ್ಲಿಸಲಾಗಿದೆ.
ಮಳೆಯಾಗದೆ ಇದ್ದರೆ ಡಿಸೆಂಬರ್‌ನಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಆತಂಕವಿದೆ. ಇನ್ನೂ ಬೇಸಿಗೆಯಲ್ಲಂತೂ ಹನಿ ನೀರಿಗೂ ಪರದಾಡಬೇಕಾದ ಸ್ಥಿತಿ ಎದುರಾಗಲಿದೆ. ಡ್ಯಾಂನಿಂದ ನಾಲೆಗಳ ಮೂಲಕ ಕುಡಿಯುವ ಉದ್ದೇಶಕ್ಕಾಗಿ ನೀರು ಬಿಡುಗಡೆ ಮುಂದುವರೆಸಲಾಗಿದೆ. ಕಾವೇರಿ ನೀರಾವರಿ ನಿಗಮ 5,743 ಕ್ಯೂಸೆಕ್ ನೀರನ್ನು ಇದಕ್ಕಾಗಿ ಬಿಡುಗಡೆ ಮಾಡುತ್ತಿದೆ.ಕಾವೇರಿ ನೀರು ಹಂಚಿಕೆ: ಸೆ. 1ಕ್ಕೆ ವಿಚಾರಣೆ- ನೀರಿನ ಹಂಚಿಕೆ ವಿಷಯದಲ್ಲಿ ನಾವು ತಜ್ಞರಲ್ಲ : ಕೋರ್ಟ್
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು